ಸುದ್ದಿ9ಮಂಗಳೂರು:ದ.ಕ.ಜಿಲ್ಲೆಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಸೆ.30 ರಂದು ಮಂಗಳವಾರ ಮಧ್ಯಾಹ್ನ 2.30 ಗಂಟೆಗೆ ಮಂಗಳೂರಿನ ಸಿ.ವಿ.ನಾಯಕ್ ಹಾಲ್ ನಲ್ಲಿ  ಬ್ರಹ್ಮಶ್ರೀ ನಾರಾಯಣ ಗುರುಗಳ 160ನೇ ವರ್ಷದ ಜಯಂತಿ ಉತ್ಸವ ಮತ್ತು  ಹಿಂದುಳಿದ ವರ್ಗಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

images (1)images (2)

 

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಲಿದ್ದಾರೆ. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ನಾಯಕರು, ಜಿಲ್ಲಾ ನಾಯಕರು, ಶಾಸಕರು, ಮಾಜಿ ಶಾಸಕರು, ಪಕ್ಷದ ಎಲ್ಲಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋಚರ್ಾದ ಜಿಲ್ಲಾಧ್ಯಕ್ಷ ನ್ಯಾಯವಾದಿ ಮೋಹನ್ ರಾಜ್  ಕೆ.ಆರ್.   ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *