ಮಂಗಳೂರು: ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಗಣೇಶೋತ್ಸವದ ಪ್ರಯುಕ್ತ ಭಾನುವಾರ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಪ್ರತಿಷ್ಟಾಪಿಸಲ್ಪಟ್ಟಿರುವ ಶ್ರೀ ಮಹಾಗಣಪತಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಹಿಂ. ಯು. ಸೇ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಭಾಸ್ಕರಚಂದ್ರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

