ಬಂಟ್ವಾಳ: ಮೆಲ್ಕಾರ್ ಶ್ರೀ ಗುರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿಯಮಿತವು ೨೦೧೮-೧೯ ನೇ ಸಾಲಿನಲ್ಲಿ ೪೫ ಕೋ.ರೂ.ವ್ಯವಹಾರ ನಡೆಸಿ ೧೪,೦೫,೦೩೩ ರೂ. ನಿವ್ವಳ ಲಾಭಗಳಿಸಿದೆ ಎಂದು ನಿಯಮಿತದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ತಿಳಿಸಿದ್ದಾರೆ. ಸಂಘದ ಆವರಣದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಅವರು ಸದಸ್ಯರಿಗೆ ೧೩% ಡಿವಿಡೆಂಟ್ ನ್ನು ಘೋಷಿಸಿ ಸಹಕಾರ ಸಂಘದ ಅಭಿವೃದ್ಧಿಗೆ ಸದಸ್ಯರ ಸಹಕಾರ ಯಾಚಿಸಿದರು.
ಸಂಘದ ಉಪಾಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ರವರು ಮಾತನಾಡಿ, ಸಂಘವು ೧೦ ಕೋಟಿ ರೂ. ಠೇವಣಿ ಸಂಗ್ರಹಿಸಿ ೯ ಕೋಟಿ ಸಾಲ ನೀಡಿದ್ದು,ಮುಂದಿನ ವರ್ಷದಲ್ಲಿ ೧೨ ಕೋಟಿ ಠೇವಣಿ ಸಂಗ್ರಹದ ಗುರಿ ಹೊಂದಲಾಗಿದೆ ಮತ್ತು ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಅವರು ಗತವರ್ಷದ ವರದಿ ಮತ್ತು ಲೆಕ್ಕಪತ್ರಗಳನ್ನು ಸಭೆಯಲ್ಲಿ ಮಂಡಿಸಿದರು. ನಿರ್ದೇಶಕರಾದ ಕೆ. ಸಂಜೀವ ಪೂಜಾರಿ . ರತ್ನಾಕರ ನಾಡಾರು , ಸಂತೋಷ್ ಕುಮಾರ್ ಕೊಟ್ಟಿಂಜ, ನಾರಾಯಣ ಪೂಜಾರಿ ಬೊಳ್ಳುಕಲ್ಲು, , ಉಮೇಶ್ ಸುವರ್ಣ ತುಂಬೆ , ರತ್ನಾಕರ ಪೂಜಾರಿ ಮೆಲ್ಕಾರ್ , .ಪುಷ್ಪಾವತಿ, ತುಳಸಿ ಇರಾ ಉಪಸ್ಥಿತರಿದ್ದರು. ಸಂಘದ ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು ಮತ್ತು ಕಕ್ಯಪದವು ಶಾಖಾ ವ್ಯವಸ್ಥಾಪಕ ಚರಣ್ .ಕೆ. ವಂದಿಸಿದರು.
