ಬಂಟ್ವಾಳ:ತಾಲ್ಲೂಕಿನ ಪಂಜಿಕಲ್ಲು ಗ್ರಾಮ ಹೊಸಮನೆ ನಿವಾಸಿ ಪ್ರಗತಿಪರ ಕೃಷಿಕ ಧರ್ಮಪಾಲ ರೈ( 84) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.
ಮೃತರಿಗೆ ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ನ ಅಧ್ಯಕ್ಷ ಸುದರ್ಶನ ಜೈನ್ ಸಹಿತ ನಾಲ್ವರು ಪುತ್ರರು, ಐವರು ಪುತ್ರಿಯರು ಇದ್ದಾರೆ.

ಮೃತರು ನಿವೃತ್ತ ಪೋಸ್ಟ್ ಮಾಸ್ಟರ್ ಆಗಿದ್ದು, ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕರಾಗಿ, ಧಾಮರ್ಿಕ ನೇತಾರರಾಗಿ ಗುರುತಿಸಿಕೊಂಡಿದ್ದರು.
ಸಂತಾಪ: ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಮಾಜಿ ಸದಸ್ಯ ಎ.ಸಿ.ಭಂಡಾರಿ, ತಾ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.
