ಸಿದ್ಧಕಟ್ಟೆ:ಮಕ್ಕಳಿಗೆ ಬಾಲ್ಯದಿಂದಲೇ ಶಿಸ್ತುಬದ್ಧ ಕ್ರೀಡೆಯ ಬಗ್ಗೆ ಪ್ರೋತ್ಸಾಹ ನೀಡಿದಾಗ ಅವರಲ್ಲಿ ಸಾಧನಾ ಮನೋಭಾವ ಬೆಳೆಯುವುದರ ಜತೆಗೆ ಸದೃಢ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಸಾದ್ಯವಾಗುತ್ತದೆ ಎಂದು ಮಂಗಳೂರು ಮನ್‍ದೇವ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ,ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ.ಇಲ್ಲಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ವಿಭಾಗದ ‘ಬಾಲ್ ಬ್ಯಾಡ್ಮಿಂಟನ್’ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.???

ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರವು ಕ್ರೀಡೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಕ್ರೀಡಾಳುಗಳನ್ನು ಪ್ರೋತ್ಸಾಹಿಸಬೇಕು ಎಂದರು.ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಸುಂದರ ಶಾಂತಿ, ಸ್ಥಳೀಯ ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು, ಸಂಗಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸತೀಶ ಪೂಜಾರಿ, ದೈಹಿಕ ಶಿಕ್ಷಣ ಪರಿವೀಕ್ಷಕಿ ರತ್ನಾವತಿ ಶುಭ ಹಾರೈಸಿದರು.

ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಪ್ಪ, ಸಮುಹ ಸಂಪನ್ಮೂಲ ವ್ಯಕ್ತಿ ಪ್ರದೀಪ್ ಕುಮಾರ್, ಶಾಲಾ ಸಂಚಾಲಕ ವಿಜಯ ಕುಮಾರ್ ಚೌಟ, ಪ್ರಾಂಶುಪಾಲ ಡಾ.ಸಂತೋಷ್ ಕುಮಾರ್, ವಿದ್ಯಾರ್ಥಿ ನಾಯಕ ಹರ್ಷಲ್ ರಾಡ್ರಿಗಸ್ ಮತ್ತಿತರರು ಇದ್ದರು.ಮುಖ್ಯಶಿಕ್ಷಕಿ ಸಬಿತಾ ಲವಿನಾ ಪಿಂಟೋ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿಯರಾದ ಪುಷ್ಪಲತಾ ವಂದಿಸಿ, ಚೈತ್ರಾ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *