ಬಂಟ್ವಾಳ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್‌ನಿಂದ ಮಾಣಿ ಜಂಕ್ಷನ್ ತನಕ ರಸ್ತೆಯು ಸಂಪೂರ್ಣ ಹದೆಗೆಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನಾ ಪಾದಯಾತ್ರೆ ಬುಧವಾರ ಮೆಲ್ಕಾರ್‌ನಿಂದ ಬಿ.ಸಿ.ರೋಡ್‌ವರೆಗೆ ನಡೆಯಿತು. ಈ ಸಂದರ್ಭ ಮೆಲ್ಕಾರ್ ಜಂಕ್ಷನ್‌ನಲ್ಲಿ ೫ ನಿಮಿಷಗಳ ಕಾಲ ಹೆದ್ದಾರಿ ತಡೆ ಮಾಡಲಾಯಿತು.
ಮೆಲ್ಕಾರ್ ಜಂಕ್ಷನ್‌ನಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಚಿವ ರೈ ಅವರು ವಾಹನ ಸಂಚಾರಕ್ಕೆ ಅಡಚಣೆಯಾಗಿ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ. ಕೇಂದ್ರ, ರಾಜ್ಯ ಸರಕಾರವಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಇದರ ಬಗ್ಗೆ ಯಾವುದೇ ರೀತಿಯ ಗಮನಹರಿಸದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.