ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿದಿದ್ದು, ಸೆ.27ರಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಲಿದೆ. ಹೀಗಾಗಿ ಶನಿವಾರ ಪರಪ್ಪನ ಅಗ್ರಹಾರದಲ್ಲಿರುವ ವಿಶೇಷ ಕೋರ್ಟ್‌ಗೆ ಸ್ವತಃ ಮುಖ್ಯಮಂತ್ರಿ ಜಯಲಲಿತಾ ಅವರು ಖುದ್ದು ಹಾಜರಾಗಲಿದ್ದಾರೆ. ತೀವ್ರ ಕುತೂಹಲ ಮೂಡಿಸಿರುವ ತೀರ್ಪು ಜಯಲಲಿತಾ ರಾಜಕೀಯ ಭವಿಷ್ಯವನ್ನೇ ನಿರ್ಧರಿಸಲಿದೆ.
ಶನಿವಾರ ಬೆಳಗ್ಗೆ 8.38ಕ್ಕೆ ಚೆನ್ನೈನಿಂದ ಹೊರಟು ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಸುಮಾರು 9.30ಕ್ಕೆ ಆಗಮಿಸಲಿದ್ದಾರೆ. ನಂತರ ಎಚ್‌ಎಎಲ್‌ನಿಂದ ವಿಶೇಷ ವಿಮಾನದಲ್ಲಿ ಹೊರಟು ಪರಪ್ಪನ ಅಗ್ರಹಾರದ ಕೋರ್ಟ್ ಹಿಂಭಾಗದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ಗೆ 10 ಗಂಟೆಗೆ ಬಂದಿಳಿಯಲಿದ್ದಾರೆ. ಸ್ವಲ್ಪ ಸಮಯ ವಿಶ್ರಾಂತಿ ಪಡೆದ ನಂತರ 11 ಗಂಟೆಗೆ ಸಿಬಿಐ ವಿಶೇಷ ಕೋರ್ಟ್‌ಗೆ ಆಗಮಿಸಲಿದ್ದಾರೆ. ಆದಾಯಕ್ಕೀ ಮೀರಿ ಆಸ್ತಿ ಸಂಪಾದನೆ ಪ್ರಕರಣದ ತೀರ್ಪು ಸೆ.27ರಂದು ವಿಶೇಷ ನ್ಯಾಯಾಲಯದಲ್ಲಿರುವುದರಿಂದ ಹೊಸೂರು ರಸ್ತೆ, ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಗುರುವಾರ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ, ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಭದ್ರತೆ ಪರಿಶೀಲಿಸಿದರು. ಶುಕ್ರವಾರ ಸಂಜೆ ನ್ಯಾಯಾಲಯದ ಸುತ್ತಮುತ್ತ ಸರ್ಪಗಾವಲು