ಬಂಟ್ವಾಳ : ಇಂದಿನ ಆಧುನಿಕ ಜಗತ್ತಿಗೆ ಅವಶ್ಯವಿರುವ ಜವಾಬ್ದಾರಿಯುತ ವ್ಯಕ್ತಿಯನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಜೊತೆಗೆ ಪೋಷಕರ ಪಾತ್ರವೂ ಮಹತ್ತರವಾದುದು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

20190914_115753

ಅವರು ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ 2019- 20ನೇ ಸಾಲಿನ ಪೋಷಕರ ಸಭೆಯಲ್ಲಿ ಪೋಷಕರನ್ನುದ್ದೇಶಿಸಿ ಮಾತನಾಡಿದರು.ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಹಸಂಚಾಲಕರಾದ ರಮೇಶ್ ಹಾಗೂ ಆಡಳಿತ ಮಂಡಳಿ ಸದಸ್ಯರಾದ ನಾಗೇಶ್ ಉಪಸ್ಥಿತರಿದ್ದರು.

20190914_131825

ಕಾಲೇಜಿನ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ಪ್ರಾಸ್ತವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಕರುಣಾಕರ್ ವಂದಿಸಿದರು. ಜೀವಶಾಸ್ತ್ರ ಉಪನ್ಯಾಸಕಿಯಾದ ಶೈಲಿನಿ.ಬಿ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *