ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತಮಿಳುನಾಡು ಸಿಎಂ ಜಯಲಲಿತಾಗೆ 4 ವರ್ಷ ಜೈಲುಶಿಕ್ಷೆಯಾಗಿದೆ. ಸಿಬಿಐ ವಿಶೇಷ ನ್ಯಾಯಾಲಯ ಜಯಲಲಿತಾಗೆ ಶಿಕ್ಷೆ ವಿಧಿಸಿ ಆದೇಶಿಸಿದೆ. 66.65 ಕೋಟಿ ರೂಪಾಯಿಗಳ ಅಕ್ರಮ ಸಂಪತ್ತು ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಈ ಶಿಕ್ಷೆ ವಿಧಿಸಿದೆ.
