ಮೂಡುಬಿದಿರೆ:ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಹಾಗೂ ಅಲ್ಫುರ್ಕಾನ್ ಇಸ್ಲಾಮಿಕ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆಯಿತು.
15 ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ 15 ಚಿನ್ನ, 11 ಬೆಳ್ಳಿ ಪದಕಗಳನ್ನು ಪಡೆದು ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ 12 ಚಿನ್ನ, 12 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಪಡೆದು ಆಳ್ವಾಸ್ ಪ.ಪೂ. ಕಾಲೇಜು ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಬಾಲಕರ ವಿಭಾಗದಲ್ಲಿ ರೋಟರಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು, ಬಾಲಕಿಯರ ವಿಭಾಗದಲ್ಲಿ ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
