ಬಂಟ್ವಾಳ : ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ವಿದ್ಯಾರ್ಥಿಗಳ ಯಾವುದೇ ಬೇಡಿಕೆಗಳನ್ನು ಆಡಳಿತ ಮಂಡಳಿ ಈಡೇರಿಸುತ್ತಿಲ್ಲ ಎಂದು ಆರೋಪಿಸಿ ಬಂಟ್ವಾಳ ಎಸ್‌ವಿಎಸ್ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಮಂಗಳವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾಲೇಜಿನ ವಿದ್ಯಾರ್ಥಿ ನಾಯಕ ಹರ್ಷಿತ್ ಅವರ ನೇತೃತ್ವದಲ್ಲಿ ಬೆಳಿಗ್ಗೆನಿಂದಲೇ ತರಗತಿಯನ್ನು ಬಹಿಷ್ಕರಿಸಿ ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಆದರೆ, ಪ್ರಾಂಶುಪಾಲರಾಗಲಿ, ಆಡಳಿತ ಮಂಡಳಿಯಾಗಲಿ ಸ್ಪಂದಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಳಿಕ ಮನೆಯತ್ತ ಹೆಜ್ಜೆ ಹಾಕಿದರು.
ಮಂಗಳವಾರ ಪತಿಭಟನೆಯ ವೇಳೆ ಪ್ರಾಂಶುಪಾಲರು ಕಾರ್ಯಕ್ರಮವೊಂದರ ನಿಮಿತ್ತ ಗೈರು ಹಾಜರಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮನವಿ ನೀಡಲು ಸಾಧ್ಯವಾಗಿರಲಿಲ್ಲ. ಇದರಿಂದ ವಿದ್ಯಾರ್ಥಿಗಳು ಸಾಮಾಹಿಕ ತರಗತಿ ಬಹಿಷ್ಕರಿಸಿ ಮನೆಯತ್ತ ತೆರಳಿದರು. “ಇದು ವಿದ್ಯಾರ್ಥಿಗಳ ಆಪಾದನೆ ಅಷ್ಟೇ. ನಮ್ಮ ಕಾಲೇಜಿನಲ್ಲಿ ಉನ್ನತ ಮಟ್ಟದ ಸೌಲಭ್ಯಗಳಿವೆ. ಈ ಮೊದಲು ವಿದ್ಯಾರ್ಥಿಗಳ ದೂರಿಗೆ ಸ್ಪಂದಿಸಿ ಸೌಲಭ್ಯಗಳನ್ನು ನೀಡಲಾಗಿದೆ. ಕ್ಯಾಂಪಸ್‌ನ ಹೊರಭಾಗದಲ್ಲಿರುವ ಬಸ್ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ. ಮತ್ತೆ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಭಾಗವಹಿಸುವ ವಿದ್ಯಾರ್ಥಿಗಳ ವೆಚ್ಚವನ್ನು ಕಾಲೇಜು ಭರಿಸುತ್ತಿದೆ. ಹಾಗೆಯೇ ಇಂದು ನಡೆಸಿದ ಪ್ರತಿಭಟನೆಯ ಬಗ್ಗೆ ವಿದ್ಯಾರ್ಥಿಗಳು ಯಾವುದೇ ಮಾಹಿತಿ ನೀಡಿಲ್ಲ. ನಿನ್ನೆಯ ದಿನ ಕೂಡಾ ವಿದ್ಯಾರ್ಥಿಗಳು ತನ್ನನ್ನು ಭೇಟಿಯಾಗಿಲ್ಲ. ಮನವಿಯನ್ನೂ ಕೂಡಾ ನೀಡಿಲ್ಲ.


