ಕೈಕಂಬ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(ಬಂಟ್ವಾಳ), ಪ್ರಾಥಮಿಕ ಆರೋಗ್ಯ ಕೇಂದ್ರ(ಬೆಂಜನಪದವು), ಕರಿಯಂಗಳ ಗ್ರಾಮ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ(ಬಂಟ್ವಾಳ) ಇವುಗಳ ಜಂಟಿ ಆಶ್ರಯದಲ್ಲಿ ಸೆ. 24ರಂದು ಪೊಳಲಿಯ ರಾಮಕೃಷ್ಣ ತಪೋವನದಲ್ಲಿ ಪೌಷ್ಠಿಕ ಆಹಾರ ಸಪ್ತಾಹದಂಗವಾಗಿ `ಪೋಷಣ್ ಅಭಿಯಾನ ಮಾಸಾಚರಣೆ’ ಜರುಗಿತು.

24vpposhan

ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಅವರು ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಿ, ಶುಭಾಶೀರ್ವಚನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು  ಮಕ್ಕಳೊಂದಿಗೆ ಮಾತೆಯರು ಪಾಲ್ಗೊಂಡಿದ್ದರು. ಸಿಡಿಪಿಒ ಗಾಯತ್ರಿ ಕಂಬಳಿ  ಪ್ರಾಸ್ತಾವಿಕವಾಗಿ ಮಾತನಾಡಿ   ಮಕ್ಕಳ ಪೌಷ್ಠಿಕ ಆಹಾರದ ಬಗ್ಗೆ ಮಾತೆಯರು ಎಚ್ಚರವಹಿಸಬೇಕು. ಸರ್ಕಾರಿಂದ ಲಭ್ಯವಿರುವ ಸವಲತ್ತು ಪಡೆದುಕೊಳ್ಳಬೇಕು ಎಂದರು.24-02

001ಬಂಟ್ವಾಳ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಇಂದಿರಾ ಸ್ವಾಗತಿಸಿದರು. ಶ್ರೀ ರಾಜೇಶ್ವರಿ ಸ್ತ್ರೀ ಶಕ್ತಿ ಗೊಂಚಲು ಅಧ್ಯಕ್ಷೆ ಯಶೋದಾ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ಯಶವಂತ ಪೊಳಲಿ, ಕರಿಯಂಗಳ ಗ್ರಾಪಂ ಪಿಡಿಒ ಪದ್ಮಾ ನಾಯ್ಕ್, ‌ಆಶಾಪೆಸಿಲೇಟರ್ ಗಿರಿಜಾ, ಬೆಂಜನಪದವು ಆರೋಗ್ಯ ಇಲಾಖೆ ಸಿಬ್ಬಂದಿ ದೇವಕಿ ಉಪಸ್ಥಿತರಿದ್ದರು.24-06

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಪ್ರಾಸ್ತಾವಿಕ ಮಾತನ್ನಾಡಿದರು. ಅಂಗನವಾಡಿ ಕಾರ್ಯಕರ್ತೆ ರೇಣುಕಾ ಕಾರ್ಯಕ್ರಮ ನಿರೂಪಿಸಿದರೆ, ಆಶಾ ಕಾರ್ಯಕರ್ತೆ ನಿಶಾ ವಂದಿಸಿದರು.

ಈ ಸಂದರ್ಭದಲ್ಲಿ ಮಕ್ಕಳಿಗೆ ಅನ್ನ ಪ್ರಾಶನ ಮತ್ತು ಪೌಷ್ಠಿಕ ಆಹಾರದ ಬಗ್ಗೆ ಬೀದಿ ನಾಟಕ ಆಯೋಜಿಸಲಾಯಿತು.

By suddi9

Leave a Reply

Your email address will not be published. Required fields are marked *