ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|| ಪ್ರಭಾಕರ್ ಭಟ್‍ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಠಲ ನಾಯ್ಕ, ಉಪಾಧ್ಯಕ್ಷರಾದ ಪೂರ್ಣಿಮ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಸಹ ಸಂಚಾಲಕರಾದ ರಮೇಶ್ ಎನ್, ಶ್ರೀರಾಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ವಸಂತಿ ಕುಮಾರಿ, ನಿವೃತ್ತ ದೈಹಿಕ ಶಿಕ್ಷಕರಾದ ರಾಧಾಕೃಷ್ಣ ಅಡ್ಯಂತಾಯ, ಶ್ರೀರಾಮ ಪ್ರೌಢಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

