ಬಂಟ್ವಾಳ: ಬಂಟ್ವಾಳತಾಲ್ಲೂಕಿನ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಗುರುತಿಸಿ ಈಗಾಗಲೇ ಒಟ್ಟು 87 ಎಕರೆಗೂ ಮಿಕ್ಕಿ ಜಮೀನು ಮೀಸಲಿಡಲಾಗಿದ್ದು, ಕಳೆದ ಐದು ವರ್ಷಗಳಿಂದ ಸ್ಥಗಿತಗೊಂಡಿದ್ದ ಬಡಜನರಿಗೆ ವಸತಿಗೆ ನಿವೇಶನ ಒದಗಿಸುವ ಮಹತ್ಕಾರ್ಯಕ್ಕೆ ಇದೇ ಪ್ರಥಮ ಬಾರಿಗೆ ಇಲ್ಲಿನ ಕಾವಳಮೂಡೂರು ಗ್ರಾಮ ಪಂಚಾಯಿತಿನ ಮೂಲಕ ಚಾಲನೆ ದೊರೆತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ತಾಲ್ಲೂಕಿನ ಕಾವಳಮೂಡೂರು ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ನಡೆದ ರೂ 17ಲಕ್ಷ ವೆಚ್ಚದ ರಾಜೀವ್ ಗಾಂಧಿ ಸೇವಾ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಅರ್ಹ ಒಟ್ಟು 80 ಮಂದಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಬಳಿಕ ಅವರು ಮಾತನಾಡಿದರು.
27btl-1

4 (2)
ತಾಲ್ಲೂಕಿನ ಒಟ್ಟು 47 ಗ್ರಾಮ ಪಂಚಾಯಿತಿಗಳ ಪೈಕಿ ಈಗಾಗಲೇ 42 ಪಂಚಾಯಿತಿನಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ ನಿಮರ್ಾಣಗೊಂಡಿದ್ದು, ಅಂಗನವಾಡಿ ಕೇಂದ್ರ ನಿರ್ಮಾಣ, ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಬಂಟ್ವಾಳ ತಾಲ್ಲೂಕು ಮುಂಚೂಣಿಯಲ್ಲಿದೆ ಎಂದು ಅವರು ತಿಳಿಸಿದರು.
ಅಭಿವೃದ್ಧಿ ಕಾಮಗಾರಿ:
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ರೂ 5ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧ, ತಲಾ ರೂ ಎರಡು ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ ಮತ್ತು ದೇವರಾಜ ಅರಸು ಭವನ, ರೂ 7ಕೋಟಿ ವೆಚ್ಚದಲ್ಲಿ ಸುಸಜ್ಜಿತ ಸರ್ಕಾರಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ತ್ವರಿತವಾಗಿ ಆರಂಭಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಸನ್ಮಾನ:
ಇದೇ ವೇಳೆ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕೆದ್ದಳಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಮತ್ತು ಕಾವಳಮೂಡೂರು ಗ್ರಾ.ಪಂ.ನ ಹಿರಿಯ ಅಭಿವೃದ್ಧಿ ಅಧಿಕಾರಿ ಗಣಪತಿ ಮುಚ್ಚಿನ್ನಾಯ ಇವರನ್ನು ಸಚಿವರು ಸನ್ಮಾನಿಸಿದರು.
ವಿತರಣೆ:
ಮಂಗಳೂರು ಲಯನ್ಸ್ ಕ್ಲಬ್ನ ವತಿಯಿಂದ ಸ್ಥಳೀಯ ಅರ್ಹ ಬಡ ಫಲಾನುಭವಿಗಳಿಗೆ ಉಚಿತ ಅಕ್ಕಿ, ಸೀರೆ, ಮತ್ತು ಬೆಡ್ಶೀಟ್ (ಚಾದರ) ವಿತರಿಸಲಾಯಿತು. ಲಯನ್ಸ್ ಕ್ಲಬ್ಬಿನ ವಿಭಾಗೀಯ ಅಧ್ಯಕ್ಷ ಗೋವರ್ಧನ ಶೆಟ್ಟಿ, ಜಿಲ್ಲಾ ಗವರ್ನರ್ ಮಂಜುನಾಥ ಮೂರ್ತಿ , ಉಪ ಗವರ್ನರ್ ಕವಿತಾ ಶಾಸ್ತ್ರಿ ಮತ್ತಿತರರು ಶುಭ ಹಾರೈಸಿದರು.
ಬಂಟ್ವಾಳ ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ, ಗ್ರಾ.ಪಂ.ಅಧ್ಯಕ್ಷ ಯಾಕೂಬ್ ಸಾಹೇಬ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲಿಯಾನ್, ತಾ.ಪಂ.ಸದಸ್ಯ ಬಿ.ಪದ್ಮಶೇಖರ್ ಜೈನ್, ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ಪಿ.ಗಿರೀಶ್, ಕಿರಿಯ ಎಂಜಿನಿಯರ್ ಕೃಷ್ಣ, ಉಪ ತಹಶೀಲ್ದಾರ್ ಸಾಧು, ಕಾರಿಂಜ ಕ್ಷೇತ್ರದ ಮಾಜಿ ಆಡಳಿತ ಧರ್ಮದರ್ಶಿ  ಪಿ.ಜಿನರಾಜ ಆರಿಗ, ಗ್ರಾ.ಪಂ. ಉಪಾಧ್ಯಕ್ಷೆ ಸುನಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿವಾಕರ ದಾಸ್, ಮಂಜು ವಿಟ್ಲ, ಬಿ.ಎಚ್.ಖಾದರ್ ,ಬಿ.ಕೆ.ಇದಿನಬ್ಬ, ಬಾಲಕೃಷ್ಣ ಅಂಚನ್ ಮತ್ತಿತರರು ಇದ್ದರು.
ಮೆರವಣಿಗೆ:
ಆರಂಭದಲ್ಲಿ ಸನ್ಮಾನಿತರನ್ನು ತೆರೆದ ವಾಹನ ಮೂಲಕ ಬ್ಯಾಂಡು ವಾದ್ಯ ಮತ್ತು ಕೀಲು ಕುದುರೆ ಮತ್ತಿತರ ಗೊಂಬೆ ಕುಣಿತದೊಂದಿಗೆ ಆಕರ್ಷಕ ಮೆರವಣಿಗೆಯಲ್ಲಿ ಕರೆತರಲಾಯಿತು.
ಪಿಲಾತಬೆಟ್ಟು ಗ್ರಾ.ಪಂ.ಸದಸ್ಯ ಎಂ.ರಾಜೀವ ಶೆಟ್ಟಿ ಎಡ್ತೂರು ಅವರು ಸ್ವಾಗತಿಸಿ, ದೈಹಿಕ ಶಿಕ್ಷಕ ಜಯರಾಮ್ ವಂದಿಸಿದರು. ರಾಜೀವ ಕಕ್ಯಪದವು ಮತ್ತು ರತ್ನದೇವ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *