ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನರಿಕೊಂಬು ಗ್ರಾಮ ಪಂಚಾಯತ್ ವಲಯದ ಪಂಚಾಯತ್ ಮಿಲನ ಕಾರ್ಯಕ್ರಮವು ನರಿಕೊಂಬುವಿನ ಪ್ರಕಾಶ್ ಕಾರಂತರ ಮನೆಯ ವಠಾರದಲ್ಲಿ ನಡೆಯಿತು. ಮಾಜಿ ಸಚಿವರಾದ ಬಿ.ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ಕರೆ ನಡುವೆ ನೀಡಿದರು. ಪಕ್ಷ ಸಂಘಟನೆ ಹಾಗೂ ಬಲವರ್ಧನೆಯಲ್ಲಿ ಯುವಕರನ್ನೊಳಗೊಂಡ ತಂಡವನ್ನು ರಚಿಸಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಪಣ ತೊಡಬೇಕಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾ. ಪಂ ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ ಎ.ಪಿ.ಎಮ್.ಸಿ ಅಧ್ಯಕ್ಷ ಪದ್ಮನಾಭ ರೈ, ಮುಖಂಡರಾದ ಪ್ರಕಾಶ್ ಕಾರಂತ್, ಪಿ.ಎಸ್.ಅಬ್ದುಲ್ ಹಮೀದ್, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಲ್ಬರ್ಟ್ ಮಿನೇಜಸ್, ಮಾಜಿ ತಾಲೂಕು ಕೆ.ಡಿ.ಪಿ ಸದಸ್ಯ ಉಮೇಶ್ ಬೋಳಂತೂರು, ಶಂಭೂರು ವಲಯಾಧ್ಯಕ್ಷ ಉದಯ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಆನಂದ ಸಾಲ್ಯನ್, ಸಂಘಟನಾ ಕಾರ್ಯದರ್ಶಿ ಅರುಣ್ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಬೂತ್ ಅಧ್ಯಕ್ಷರು, ಯುವ ಕಾಂಗ್ರೆಸ್‌ನ ಸದಸ್ಯರು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಇದೇ ವೇಳೆ ವಲಯ ಕಾಂಗ್ರೆಸ್‌ನ ಪುನರ್ ರಚಿಸಲಾಯಿತು. ನೂತನ ವಲಯ ಅಧ್ಯಕ್ಷರಾಗಿ ಮಾಧವ ಕರ್ಬೆಟ್ಟು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಮಹಿಳಾ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಸುಮತಿ, ಉಪಾಧ್ಯಕ್ಷರಾಗಿ ಜುಬೈದಾ ಮತ್ತು ಚಂದ್ರಾವತಿ, ಎಸ್.ಸಿ.ಎಸ್.ಟಿ ಘಟಕದ ಅಧ್ಯಕ್ಷರಾಗಿ ಮೋನಪ್ಪ ನಿನ್ನಿಪಡ್ಪು, ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಪ್ರಶಾಂತ್ ಕರ್ಬೆಟ್ಟು ಮತ್ತು ವಲಯ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ ರವೀಂದ್ರ ಸಪಲ್ಯ, ಶೇಖರ್ ಪೂಜಾರಿ, ಕಾರ್ಯದರ್ಶಿಯಾಗಿ ದಿವಾಕರ ಏಲಬೆ, ಕೃಷ್ಣಪ್ಪ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ರಿಯಾಝ್ ನೆಹರುನಗರ ಇವರನ್ನು ನೇಮಕ ಮಾಡಲಾಯಿತು.

