ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ ವಿಟ್ಲ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಿಟ್ಲ ಮತ್ತು ಲಯನ್ಸ್ ಕ್ಲಬ್ ವಿಟ್ಲ ಇದರ ಸಹಯೋಗದೊಂದಿಗೆ ವಿಟ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮವನ್ನು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು.

ಕಾಲೇಜಿನ ಪ್ರಾಶುಪಾಲ ಶಂಕರ ಪಾಟಾಲಿ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಅಧ್ಯಕ್ಷ ಬಾಲಕೃಷ್ಣ ಆಳ್ವ, ವಿಟ್ಲ ವೇದಿಕೆ ಸದಸ್ಯ ಬಾಲಕೃಷ್ಣ ಕಾರಂತ ಎರುಂಬು ಮತ್ತು ವಲಯಾಧ್ಯಕ್ಷ ಜನಾರ್ಧನ ಪದ್ಮಶಾಲಿ ಮುಖ್ಯ ಅತಥಿಗಳಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ನಿವೃತ್ತ ಮಲೇರಿಯಾ ಪರಿವೀಕ್ಷಕ ಜಯರಾಮ ಪೂಜಾರಿ ಭಾಗವಹಿಸಿ ಮಾಹಿತಿ ನೀಡಿದರು.

ವಿಟ್ಲ ಯೋಜನಾ ಕಚೇರಿಯ ಯೋಜನಾಧಿಕಾರಿ ಮೋಹನ್ ಪ್ರಸ್ತಾವಿಸಿದರು. ವಿಟ್ಲ ಬಿ ಒಕ್ಕೂಟದ ಸೇವಾ ಪ್ರತಿನಿಧಿ ಸರಿತಾ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ರಮೇಶ್ ನಿರೂಪಿಸಿದರು. ವಿದ್ಯಾರ್ಥಿನಿ ಹರ್ಷಿತಾ ವಂದಿಸಿದರು.
