ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಭಾಲಭವನ ಸಮಿತಿ ಬಂಟ್ವಾಳ ಇವರ ಸಂಯುಕ್ತ ಆಶ್ರಯ ದಲ್ಲಿ ಗಾಂಧಿ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ ಬಿಸಿರೋಡಿನ ಸ್ತ್ರೀ ಶಕ್ತಿ ಸಭಾ ಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ  ವಹಿಸಿದ್ದರು  ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಿ ಎಂದು
ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು.
IMG_9081
ವಿದ್ಯಾರ್ಥಿ ಗಳ ದೇಶದ ಚರಿತ್ರೆಯನ್ನು ತಿಳಿದುಕೊಂಡು ಉತ್ತಮ ಪ್ರಜೆಗಳಾಗಿ, ಗಾಂಧಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ ಎಂದು ಅವರು ಹೇಳಿದರು. ವಿಜೇತ ಮಕ್ಕಳಿಗೆ ಪ್ರಶಂಸನಾ ಪತ್ರನೀಡಿದ
ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ ಮಾತನಾಡಿ ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಬಹಳ ಮುಖ್ಯ ಸೋಲು,ಗೆಲುವು ಮುಖ್ಯವಲ್ಲ ಎಂದರು.ವೇದಿಕೆಯಲ್ಲಿ ತಾ.ಪಂ.ಮುಖ್ಯಕಾರ್ಯನಿರ್ವಣಾಧಿಕಾರಿ ರಾಜಣ್ಣ , ಸಂಪನ್ಮೂಲ ವ್ಯಕ್ತಿಗಳಾದ ಮುರಳಿಕೃಷ್ಣ, ಚೆನ್ನಕೇಶವ , ಮುರಳೀಧರ್,ಮೇಲ್ವಿಚಾರಕಿ ಯರಾದ ಶಾಲಿನಿ, ನೀತಾಕುಮಾರಿ, ಸಿಂದೂ, ಇಂದಿರಾ ಉಪಸ್ಥಿತರಿದ್ದರು. ಬಂಟ್ವಾಳ ಸಿ.ಡಿ.ಪಿ.ಒ.ಗಾಯತ್ರಿ ಕಂಬಳಿ ಪ್ರಸ್ತಾವಿಕವಾಗಿ ಮಾತನಾಡಿದರು. ಹಿರಿಯ ಮೇಲ್ವಿಚಾರಕಿ ಉಷಾ ಸ್ವಾಗತಿಸಿದರು. ಹಿರಿಯ ಮೇಲ್ವಿಚಾರಕಿ ಭಾರತಿಕುಂದರ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *