ಉಡುಪಿ :- ಸ್ವಚ್ಛ ಭಾರತ್ ಫ್ರೆಂಡ್ಸ್ ಇದರ “ವಿದ್ಯಾಮಿತ್ರ ಯೋಜನೆಯ” ಅಂಗವಾಗಿ ಇಂದು ಉಡುಪಿಯ ಸರಕಾರಿ ಪದವಿಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್ ಇಲ್ಲಿಯ ಗ್ರಂಥಾಲಯಕ್ಕೆ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚಿನ ಬೆಲೆಯ ಪಠ್ಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಉಚಿತವಾಗಿ ಅ.7 ರಂದು ನೀಡಲಾಯಿತು.
ಪ್ರಾಂಶುಪಾಲರಾದ ವಿಲಾಸ್ ಕುಮಾರ್, ಜೇಸಿಐ ಉಡುಪಿ ಸಿಟಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್, ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು.