ಬಂಟ್ವಾಳ: ಯುವವಾಹಿನಿವೆಂಬುದು ಕ್ರಿಯಾತ್ಮಕ ಚಟುವಟಿಕೆಗಳನ್ನು ಮಾಡುವ ಯುವಮನಸ್ಸುಗಳನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಒಂದು ಅದ್ಭುತ ಸಂಘಟನೆ, ಚಂಚಲತೆಯ ಯುವಮನಸ್ಸುಗಳನ್ನು ಧನಾತ್ಮಕವಾದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಯುವವಾಹಿನಿಯ  ಬದ್ಧತೆ ಅಭಿನಂದನೀಯವಾದುದು” ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಹೇಳಿದರು.   ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ(ರಿ.) ಮಾಣಿ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
IMG-20191022-WA0002
ಯುವವಾಹಿನಿ(ರಿ.) ಕೇಂದ್ರ ಸಮಿತಿ ಅಧ್ಯಕ್ಷ  ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮದ ಉದ್ಘಾಟನೆ ಗೈದು ಶುಭ ಹಾರೈಸಿದರು.   ಗೆಜ್ಜೆ ಗಿರಿ ನಂದನ ಬಿತ್ತಿಲ್ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು ರವರು  ನೆನಪಿನ ಸಂಚಿಕೆ ‘ಮಾಣಿಕ್ಯ’ವನ್ನು ಬಿಡುಗಡೆಗೊಳಿಸಿದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ| ರಾಜಾರಾಮ್ ಅವರು ನೂತನ ಪದಾಧಿಕಾರಿಗಳ ಪದ ಪ್ರಧಾನದ ಕಾರ್ಯಕ್ರಮವನ್ನು ನೆರವೇರಿಸಿದರು. ಚುನಾವಣಾಧಿಕಾರಿಯಾಗಿದ್ದ ರಾಜೇಶ್ ಪೂಜಾರಿ ಬಾಬಣಕಟ್ಟೆ ಪದಾಧಿಕಾರಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದರು. ಮಾಣಿ ನಾರಾಯಣ ಗುರು ಸೇವಾ   ಸಂಘದ  ಅಧ್ಯಕ್ಷ  ನಾರಾಯಣ ಸಾಲ್ಯನ್, ಗೌರವಾಧ್ಯಕ್ಷ  ಈಶ್ವರ ಪೂಜಾರಿ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ  ಪ್ರೇಮನಾಥ್ ಕೆ,ಪುತ್ತೂರು ಉಪವಿಭಾಗದ ಸಹಾಯಕ ಅಂಚೆ ಅಧೀಕ್ಷಕರಾದ ಲೋಕನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಯುವವಾಹಿನಿ(ರಿ.) ಮಾಣಿ ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಬಾಕಿಲ ರವರು ವಹಿಸಿದ್ದರು.
IMG-20191022-WA0040
ಇದೇ ಸಂದರ್ಭದಲ್ಲಿ ಯುವವಾಹಿನಿ(ರಿ.)ಮಾಣಿ ಘಟಕ ಶಾಶ್ವತ ವಿದ್ಯಾನಿಧಿ ಯೊಜನೆಯ ಮೂಲಕ ಘಟಕದ ಸಕ್ರಿಯ ಸದಸ್ಯೆಯೊಬ್ಬರಿಗೆ ಉನ್ನತ ಶಿಕ್ಷಣಕ್ಕಾಗಿ 25 ಸಾ.ರೂ.ಸಹಾಯಧನದ ಚೆಕ್ ವಿತರಿಸಲಾಯಿತು. ಹಾಗೆಯೇ ಸ್ಪಂದನ ಯೋಜನೆಯ ಮೂಲಕ 2 ಬಡ ಕುಟುಂಬಗಳಿಗೆ ಸಹಾಯಧನ ವಿತರಿಸಲಾಯಿತು ಮತ್ತು ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ   ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಅಭಿನಂದಿಸಲಾಯಿತು.  ಇದೇ ವೇಳೆ   ರಾಷ್ಟ್ರೀಯ ಯುವ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು,ಯುವವಾಹಿನಿ (ರಿ.)ಕೇಂದ್ರ ಸಮಿತಿಯ ನಿ.ಪೂ ಅಧ್ಯಕ್ಷರಾದ ಜಯಂತ್ ನಡುಬೈಲು,ಸಮಾಜ ಸೇವಕ ಸೊಮಪ್ಪ ಪೂಜಾರಿ ಮದೇಲು,ಉದ್ಯಮಿ ಮೋಹನ್ ಕುಮಾರ್,   ಎಸ್ಎಎಸ್ಎಲ್ ಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿ ಪ್ರಜ್ಞಾ,ಬಾಲ ಪ್ರತಿಭೆ ದಿಶಾ ಬರಿಮಾರು ಇವರನ್ನು ಸನ್ಮಾನಿಸಲಾಯಿತು.ಅದೇ ರೀತಿ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ  ಪುರಸ್ಕೃತರಾದ ತ್ರಿವೇಣಿ ರಮೇಶ್ ಪೂಜಾರಿ, ಯುವವಾಹಿನಿ ಸಾಧಕ ಪ್ರಶಸ್ತಿ ಪಡೆದ ಘಟಕದ ಉಪಾಧ್ಯಕ್ಷ ಪ್ರಶಾಂತ್ ಅನಂತಾಡಿ ಅವರನ್ನು ಅಭಿನಂದಿಸಲಾಯಿತು.

ಯುವವಾಹಿನಿ (ರಿ.) ಮಾಣಿ ಘಟಕದ ನಿಕಟಪೂರ್ವ   ಅಧ್ಯಕ್ಷ  ಹರೀಶ್ ಪೂಜಾರಿ ಬಾಕಿಲ ದಂಪತಿಯನ್ನು ಗೌರವಿಸಲಾಯಿತು. ನಿಯೋಜಿತ ಅಧ್ಯಕ್ಷ ರಮೇಶ್ ಪೂಜಾರಿ ಮುಜಲ ಉಪಸ್ಥಿತಿಯಿದ್ದರು. ಘಟಕದ ಕಾರ್ಯದರ್ಶಿ ಸುಜಿತ್ ಅಂಚನ್ ಗತವರ್ಷದ ವರದಿ ವಾಚಿಸಿದರು. ಉಪಾಧ್ಯಕ್ಷ ಪ್ರಶಾಂತ್ ಅನಂತಾಡಿ ಪ್ರಾಸ್ತಾವಿಸಿ, ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಶಿವರಾಜ್ ಪಿ.ಅರ್  ವಂದಿಸಿದರು. ಘಟಕದ ಸದಸ್ಯರಾದ ದಿನಕರ್ ಬರಿಮಾರು,ದೀಪಕ್ ಪೆರಾಜೆ,ತೃಪ್ತಿ ಮಿತ್ತೂರು ಮತ್ತು ರಾಜೇಶ್ ಬಲ್ಯ ಕಾರ್ಯಕ್ರಮ ನಿರ್ವಹಿಸಿದರು.ಸ್ವರ್ಣಜ್ಯೊತ್ಸ ಹಾಗೂ ತಂಡದವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

By suddi9

Leave a Reply

Your email address will not be published. Required fields are marked *