ಬಂಟ್ವಾಳ: ಕೆಸ್ಸಾರ್ಟಿಸಿ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿ ಬಸ್ ಚಾಲಕ ಗಂಭೀರ ಗಾಯ, ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ಬುಧವಾರ ಸಂಭವಿಸಿದೆ.15d63ea4-ad31-496c-9eb8-8ffcef588b92

ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ವಿಟ್ಲ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಕಂಬಳಬೆಟ್ಟು ಎಂಬಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದ ಇತರ ಪ್ರಯಾಣಿಕರು ಕೂಡಾ ಸಣ್ಣ ಪುಟ್ಟಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

By suddi9

Leave a Reply

Your email address will not be published. Required fields are marked *