ಬಂಟ್ವಾಳ: ಗುರುವಾರ (ಅ.24) ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬೆಳಗ್ಗೆ ೯ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ೧೦ಕ್ಕೆ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಪಶ್ಚಿಮ ವಲಯ ಹಾಗೂ ಮಂಗಳೂರಿನ ಹಿರಿಯ ಪೋಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಮಂಗಳೂರು ಮಹಾನಗರಪಾಲಿಕೆಗೆ ನ.12 ರಂದು ಚುನಾವಣೆ ನಡೆಯಲಿರುವುದರಿಂದ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಸಭೆಗಳು ಬಂಟ್ವಾಳಕ್ಕೆ ಶಿಫ್ಟ್ ಆಗಿದೆ.
