ಬಂಟ್ವಾಳ: ಕರಾವಳಿಯ ಭದ್ರತಾ ಪಡೆಯನ್ನು ಬಲವರ್ಧನೆಗೊಳಿಸಿ, ತೀರ ಪ್ರದೇಶದ ಸುರಕ್ಷತೆಗೆ ಗರಿಷ್ಠ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಗುರುವಾರ ಬಂಟ್ವಾಳಕ್ಕಾಗಮಿಸಿದ್ದ ಗೃಹಸಚಿವರು ಇಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾತ್ರಿಪಾಳಯದಲ್ಲಿ ಕಾರ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳ ಜೊತೆ ಜನರನ್ನೂ ಪಾಲ್ಗೊಳ್ಳುವಂತೆ ಮಾಡುವ ಜನಸ್ನೇಹಿ ವ್ಯವಸ್ಥೆಯನ್ನು ಜಾರಿಗೊಳಿಸುವುದಾಗಿ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾಎಸ್ಪಿ ಕಛೇರಿ ಸ್ಥಳಾಂತರದ ಬಗ್ಗೆ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ನಡೆಸಿ ಸ್ಪಷ್ಟ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ ಅವರು,ಬಂಟ್ವಾಳ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು, ಬಂಟ್ವಾಳ ನಗರ ಹಾಗೂ ಗ್ರಾಮಾಂತರಕ್ಕೆ ಪ್ರತ್ಯೇಕ ವೃತ್ತನಿರೀಕ್ಷಕರನ್ನು ನೇಮಿಸಲಾಗುವುದು, ಈ ಸಂದರ್ಭ ಪೊಲೀಸ್ ಸಿಬ್ಬಂದಿ ಸಂಖ್ಯೆ ಹೆಚ್ಚಳವಾಗಲಿದೆ ಎಂದರು. ಕರ್ನಾಟಕದಲ್ಲೇ ಅತ್ಯಂತ ಹೆಚ್ಚು ಪೊಲೀಸ್ ವಸತಿಗೃಹವಿದ್ದು, ಶೇ.60ರಷ್ಟು ಇರುವ ಕ್ವಾಟ್ರಸ್ ಗಳ ಸಂಖ್ಯೆಯನ್ನು ಮುಂದಿನ ಮೂರುವರ್ಷಗಳಲ್ಲಿ ಶೇ.80ಕ್ಕೆ ಏರಿಸುವ ಗುರಿ ಇರಿಸಲಾಗಿದೆ ಎಂದು ಅವರು ಹೇಳಿದರಲ್ಲದೆ ಗೃಹರಕ್ಷಕದಳದ ಸಿಬ್ಬಂದಿಗಳಿಗೆ ಸಮರ್ಪಕವಾಗಿ ವೇತನ ಪಾವತಿಯಾಗದ ಬಗ್ಗೆ ಸಂಬಂಧಿಸಿದ ಡಿಜಿ ಅವರ ಗಮನಕ್ಕೆ ತರಲಾಗುವುದು ಎಂದರು.
ಪಶ್ಚಿಮವಲಯದ ಐಜಿಪಿ ಅರುಣ್ ಚಕ್
ಇದಕ್ಕೂಮೊದಲು ಗೃಹಸಚಿವರು ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸ್ವೀಕರಿ
