ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಭಾರತೀಯ ಜೀವ ವಿಮಾ ನಿಗಮ ಶಾಖೆಯಲ್ಲಿ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ ನೇತೃತ್ವದ ವಿಮಾ ಪ್ರತಿನಿಧಿಗಳ ತಂಡದ ವಾರ್ಷಿಕೋತ್ಸವ ಕಾರ್ಯಕ್ರಮ ಇದೇ 27ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.ಹಿರಿಯ ಶಾಖಾಧಿಕಾರಿ ಪಿ.ಸಿ.ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಉಪ ಶಾಖಾಧಿಕಾರಿ ಸುಂದರ ಎಂ., ನಿವೃತ್ತ ಅಭಿವೃದ್ಧಿ ಅಧಿಕಾರಿ ವಾಮನ ಮೈಂದನ್, ಶಿಕ್ಷಕ ಧರಣೇಂದ್ರ ಜೈನ್, ಅಭಿವೃದ್ಧಿ ಅಧಿಕಾರಿ ಪರಮೇಶ್ವರಿ ಹೆಗ್ಡೆ ಮತ್ತಿತರ ಗಣ್ಯರು ಭಾಗವಹಿಸುವರು.ಇದೇ ವೇಳೆ ‘ದೀಪಾವಳಿ’ ಆಚರಣೆ ಸಹಿತ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
