ಬಂಟ್ವಾಳ: ಆಧುನಿಕ ತಂತ್ರಜ್ಞಾನ ಹಾಗೂ ಮಾಧ್ಯಮಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಅವಕಾಶಗಳನ್ನು ಒದಗಿಸಿಕೊಟ್ಟಿದ್ದು, ವಿದ್ಯಾರ್ಥಿಗಳು ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

IMG-20191025-WA0020
ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಪಾಣೆಮಂಗಳೂರು ಶಾರದಾ ಪ್ರೌಢಶಾಲೆ ಹಾಗೂ ಎಸ್‌ಎಲ್‌ಎನ್‌ಪಿ ವಿದ್ಯಾಲಯದ ಸಹಯೋಗದಲ್ಲಿ ಶುಕ್ರವಾರ ಆರಂಭಗೊಂಡ ಎರಡು ದಿನಗಳ ಬಂಟ್ವಾಳ ತಾಲೂಕು ಮಟ್ಟದ “ಪ್ರತಿಭಾ ಕಾರಂಜಿ,ಕಲೋತ್ಸವ-2019” ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಪ್ರತಿಭಾ ಕಾರಂಜಿ, ಕಲೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಾ, ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾಕಾರಂಜಿಯಂತಹ ಕಾರ್ಯಕ್ರಮಗಳು ಪ್ರೇರಣೆಯಾಗಿದ್ದು, ಪ್ರತಿಭೆಗಳು ಸಮಾಜದ ಶಕ್ತಿಯಾಗಿ ಬೆಳೆಯಲು ವಿದ್ಯಾರ್ಥಿಗಳು ಇಚ್ಛಾಶಕ್ತಿ ಯನ್ನು ಬೆಳೆಸಿಕೊಳ್ಳುಬೇಕೆಂದರು.

IMG-20191025-WA0017
ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಜಿ.ಪಂ.ಸದಸ್ಯರಾದ ರವೀಂದ್ರ ಕಂಬಳಿ, ಚಂದ್ರಪ್ರಕಾಶ ಶೆಟ್ಟಿ, ಮಮತಾ ಗಟ್ಟಿ,ಮಂಜುಳಾ ಮಾವೆ,ಪುರಸಭಾ ಸದಸ್ಯ ಅಬೂಬಕರ್ ಸಿದ್ದೀಕ್, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಶಾರದಾ ಪ್ರೌಢಶಾಲೆಯ ಸಂಚಾಲಕ ವೇದಮೂರ್ತಿ ಎಂ.ಜನಾರ್ಧನ ವಾಸುದೇವ ಭಟ್, ಎಸ್.ಎಲ್.ಎನ್.ಪಿ. ವಿದ್ಯಾಲಯದ ಸಂಚಾಲಕ ಸುಬೋದ್ ಜಿ.ಪ್ರಭು, ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್,ಯುವಜನ ಸಬಲೀಕರಣ ಕ್ರೀಡಾಧಿಕಾರಿ ನವೀನ್ ಪಿ.ಎಸ್, ವಿವಿಧ ಶಿಕ್ಷಕ ಸಂಘಟನೆಗಳ ಪ್ರಮುಖರಾದ ಶಿವಪ್ರಸಾದ್ ಶೆಟ್ಟಿ, ಜೋಯಲ್ ಲೋಬೋ, ಬಿ.ಕೆ.ಭಂಡಾರಿ, ಮುರಳೀಧರ, ಚಿನ್ನಪ್ಪ, ಸುಬ್ರಾಯ ಕಾಮತ್, ಶಾರದಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಭೋಜ.ಕೆ., ಎಸ್.ಎಲ್.ಎನ್.ಪಿ. ಮುಖ್ಯ ಶಿಕ್ಷಕಿ ರಮಾ ಎಸ್. ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

IMG-20191025-WA0018
ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಸ್ವಾಗತಿಸಿದರು, ನೋಡಲ್ ಅಧಿಕಾರಿ ಸುಶೀಲಾ ವಂದಿಸಿದರು.
ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಎರಡು ದಿನಗಳ ಕಾಲ ನಡೆಯಲಿರುವ ಕಲೋತ್ಸವದಲ್ಲಿ 25ಕ್ಕೂ ಅಧಿಕ ಸ್ಪರ್ಧೆಗಳು ನಡೆಯಲಿದ್ದು, ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2500ಕ್ಕೂ ಅಧಿಕ ವಿದ್ಯಾರ್ಥಿಗಳು ಕಲೋತ್ಸವದಲ್ಲಿ ಭಾಗವಹಿಸುತ್ತಿದ್ದಾರೆ.
ಇದೇ ಸಂದರ್ಭ ತಾಲೂಕು ಪಂಚಾಯತ್ ವತಿಯಿಂದ ಕ್ರೀಡಾ ವಿದ್ಯಾರ್ಥಿ ಗಳಿಗೆ ನೀಡಲಾಗುವ ಸಮವಸ್ತ್ರವನ್ನು ಅನಾವರಣಗೊಳಿಸಲಾಯಿತು. ಮಳೆಯ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಸಾರಗಿದ್ದರೂ,ಪೂರ್ವ ನಿಗದಿಯಾದ ಹಿನ್ನಲೆಯಲ್ಲಿ ಪ್ರತಿಭಾಕಾರಂಜಿ ಕಾರ್ಯಕ್ರಮ ನಡೆಯಿತು.

By suddi9

Leave a Reply

Your email address will not be published. Required fields are marked *