ಬಂಟ್ವಾಳ:ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಹಾಗೂ ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬರಿಮಾರು ಗ್ರಾಮದ ಕಡೆಕ್ಕಾನ್ ಗುತ್ತು ಪ್ರಸನ್ನ ಕಾಮತ್ ಅವರ ಮನೆಯ ವಠಾರದಲ್ಲಿ ಸಾಮೂಹಿಕ ಗೋಪೂಜೆಯು ವಿಧಿವಿದಾನಗಳೊಂದಿಗೆ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಇದರ ನೇತೃತ್ವ ವಹಿಸಿದ್ದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳ ಮಾವೆ, ಉದ್ಯಮಿ ಜಗನ್ನಾಥ ಚೌಟ ಬದಿಗುಡ್ಡೆ, ಯುವ ಕಾಂಗ್ರೆಸ್ ನ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹಿಳಾ ಕಾಂಗ್ರೆಸ್ನ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ನ ಅಧ್ಯಕ್ಷ ವಿಜಯ, ಮಾಣಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆ ರಮಣಿ ಡಿ ಪೂಜಾರಿ, ವಲಯ ಅಧ್ಯಕ್ಷರುಗಳಾದ ಕುಶಲ ಎಮ್ ಪೆರಾಜೆ, ಶ್ರೀಧರ್ ರೈ, ಅಶೋಕ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಧುಸೂಧನ್ ಶೆಣೈ ಕಳ್ಳಿಗೆ, ಮಾಣಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
