ಪೊಳಲಿ: ರಾಮಕೃಷ್ಣ ತಪೋವನ ರೋಟರಿ ಕ್ಲಬ್ ಮಂಗಳೂರು ನಾರ್ತ್ ,ವಿವೇಕಾನಂದ ರೋಟರಿ ಕಮ್ಯೂನಿಟಿ ಕಾರ್ಪ್ಸ್ ಪೊಳಲಿ, ರೋಟರ್ಯಾಕ್ಟ್ ಕ್ಲಬ್ ಮಂಗಳೂರು ನಾರ್ತ್ ಮತ್ತು ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನ.೩ರಂದು ಭಾನುವಾರ ಉಚಿತ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ ಪೊಳಲಿ ರಾಮಕೃಷ್ಣ ತಪೋವನದಲ್ಲಿ ಕೆ.ಎಂಸಿ ಆಸ್ಪತ್ರೆಯ ನುರಿತ ವೈದ್ಯರುಶಿಬಿರದಲ್ಲಿ ಭಾಗವಹಿಸಿ ತಪಾಸಣೆ ನಡೆಸಿ ಉಚಿತ ಚಿಕಿತ್ಸೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
