ಬಂಟ್ವಾಳ: ಮಾಣಿ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಂಗಳವಾರ ಹಠಾತ್ ಭೇಟಿ ನೀಡಿ ಅಲ್ಲಿನ ಕುಂದುಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದ ರೋಗಿಗಳ ಯೋಗಕ್ಷೇಮ ವಿಚಾರಿಸಿದರಲ್ಲದೆ, ಕುಂದುಕೊರತೆಯ ಬಗ್ಗೆಯು ಶಾಸಕರು ಆಸ್ಪತ್ರೆಯ ವೈದ್ಯಾಧಿಕಾರಿಯಿಂದ ಮಾಹಿತಿ ಪಡೆದರು.
ಈ ಸಂದರ್ಭ ಜಿಪಂ ಸದಸ್ಯೆ ಕಮಾಲಾಕ್ಷಿ ಪೂಜಾರಿ,ಬಂಟ್ವಾಳ ಕ್ಷೇತ್ರ ಸಮಿತಿ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ,ಸ್ಥಳೀಯ ಪ್ತಮುಖರಾದ ನಾರಾಯಣ ಶೆಟ್ಟಿ,ಗಣೇಶ್ ರೈ ಮಾಣಿ,ಪುಷ್ಪರಾಜ್ ಚೌಟ,ಹರೀಶ್ ಮಾಣಿ,ವಿನೀತ್ ಪೆರಾಜೆ ಮೊದಲಾದವರಿದ್ದರು.
