ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ನೇತ್ರ ತಜ್ಞ ಡಾ. ಸಂಪತ್ ಕುಮಾರ್ ಮಂಗಳವಾರ ಹೃದಯಾಘಾತದಿಂದ ನಿಧನ ರಾದರು. ಡಾ. ಸಂಪತ್ ಕುಮಾರ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸುಮಾರು ೧೧ಗಂಟೆ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿತು.
ಆಸ್ಪತ್ರೆಯಲ್ಲಿದ್ದ ಇತರ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ, ಕೋಲಾರದ ಜಾಲಪ್ಪ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ವೈದ್ಯರು ತಿಳಿಸಿದ್ದಾರೆ. ಮೃತರು ಮುಳಗಾಗಿಲು ರ‍್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ‍್ಯನರ‍್ವಹಿಸುತ್ತಿರುವ ಪತ್ನಿ ಡಾ.ಲೀಲಾ ಸಂಪತ್ ಕುಮಾರ್ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
