ಬಂಟ್ವಾಳ: ಆಕ್ರಮ ಗೋಸಾಗಾಟ ಮತ್ತು ಗೋಹತ್ಯೆ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ವತಿಯಿಂದ ಬಂಟ್ವಾಳ ಎ.ಎಸ್.ಪಿ ರಾಹುಲ್ ಕುಮಾರ್ ಅವರಿಗೆ ಮನವಿ ನೀಡಲಾಯಿತು. ಆಕ್ರಮವಾಗಿ ಗೋ ಸಾಗಾಟದಿಂದಾಗಿ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಉಂಟಾಗುತ್ತಿದ್ದು ಗಲಭೆಗೆ ಕಾರಣವಾಗುತ್ತಿದೆ.

ಹಾಗಾಗಿ ಅನಧಿಕೃತ ಕಸಾಯಿಖಾನೆಗಳನ್ನು ನಿಲ್ಲಿಸದಿದ್ದರೆ ನಾವು ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭ ಅಧ್ಯಕ್ಷ ಅಶೋಕ್ ಶೆಟ್ಟಿ ಸರಪಾಡಿ, ಕಾರ್ಯದರ್ಶಿ ಸುರೇಶ್ ಬೆಂಜನಪದವು, ಸಂಯೋಜಕ್ ಗುರುರಾಜ್ ಬಂಟ್ವಾಳ, ಪ್ರದೀಪ್ ಅಜ್ಜಿಬೆಟ್ಟು, ಬಾಸ್ಕರ್ ಶೆಟ್ಟಿ ತೆಂಕಬೆಳ್ಳೂರು ಉಪಸ್ಥಿತರಿದ್ದರು.
