ಬಂಟ್ವಾಳ:  ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150 ನೇ ಜಯಂತಿ ಪ್ರಯುಕ್ತ ಗಾಂಧೀಜಿ ಯವರ ಜೀವನ ಚರಿತ್ರೆ ತಿಳಿಸುವ ಛಾಯಾಚಿತ್ರ ಪ್ರದರ್ಶನ ನವೆಂಬರ್ 11 ರಿಂದ  13 ವರೆಗೆ ಬಿ.ಸಿ. ರೋಡ್ ಬಂಟ್ವಾಳ ತಾಲೂಕು ಕಚೇರಿ ಮಿನಿ ವಿಧಾನಸೌಧದಲ್ಲಿ ನಡೆಯಲಿದೆ. 1-661
 ವಾರ್ತಾ ಮತ್ತು  ಸಾರ್ವಜನಿಕ ಸಂಪರ್ಕ  ಇಲಾಖೆ ಆಯೋಜಿಸಿರುವ ಈ ಪ್ರದರ್ಶನ  ನ. 11 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮೂರು ದಿನಗಳ ಕಾಲ ನಡೆಯುವ ಈ ಪ್ರದರ್ಶನದಲ್ಲಿ ಗಾಂಧೀಜಿಯವರ ಬದುಕಿ‌ನ ಸಮಗ್ರ ಮಾಹಿತಿಗಳ ನೈಜ ಛಾಯಾಚಿತ್ರಗಳ ಪ್ರದರ್ಶಿಸಲಾಗುವುದು ಎಂದು ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *