ಶ್ರೀರಾಮ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ತುಳಸಿ ಹಬ್ಬವನ್ನು ಆಚರಿಸಲಾಯಿತು. “ಹಿಂದೂ ಸಂಸ್ಕ್ರತಿಯಲ್ಲಿ ತುಳಸಿ ಗಿಡವನ್ನು ಶ್ರದ್ದಾ ಭಕ್ತಿಯಿಂದ ಪೂಜಿಸುತ್ತಾರೆ. ಶುಭ-ಅಶುಭ ಕಾರ್ಯಗಳಲ್ಲಿ ತುಳಸಿ ಎಲೆಗೆ ವಿಶೇಷ ಸ್ಥಾನವಿದೆ. ಚಾಂದ್ರಮಾನ ಕಾರ್ತಿಕಮಾಸ ಶುಕ್ಲಪಕ್ಷದ 12ನೇ ದಿನ ಅಂದರೆ ದ್ವಾದಶಿಯಂದು ಈ ಹಬ್ಬವನನು ಉತ್ಥಾನ ದ್ವಾದಶಿ ಎಂದು ಆಚರಿಸಲಾಗುತ್ತದೆ.
ತುಳಸಿ ಕಟ್ಟೆಯನ್ನು ರಂಗೋಲಿ, ಹೂವು, ಮಾವಿನ ಎಲೆಗಳಿಂದ ಅಲಂಕರಿಸಿ ವಿಷ್ಣುವಿನ ್ರವತಾರ ಕೃಷ್ಣನ ಮೂರ್ತಿಯನ್ನಿರಿಸಿ ಪೂಜಿಸಲಾಗುತ್ತದೆ. ತುಳಸಿ ಗಿಡದೊಂದಿಗೆ ಬೆಟ್ಟದ ನೆಲ್ಲಿಕಾಯಿ ಗಿಡವನ್ನು ನೆಟ್ಟು ಪೂಜಿಸುವ ರೂಢಿ ಇದೆ. ದೀಪದಿಂದ ಗಿಡದ ಸುತ್ತ ಅಲಂಕರಿಸಲಾಗುತ್ತದೆ.
ತುಳಸಿ ಗಿಡದ ಸುತ್ತಲೂ ಮದುವೆ ಮಂಟಪ ನಿರ್ಮಿಸಿರುತ್ತಾರೆ. ಇದಕ್ಕೆ ತುಳಸಿ ಬೃಂದಾವನವೆಂದು ಹೆಸರು. ತುಳಸಿ ಗಿಡ ರೋಗ ನಿರೋಧಕ ಶಕ್ತಿ ಸೇರಿದಂತೆ ಆರೋಗ್ಯಕ್ಕೆ ಅನುಗಣವಾದದ್ದು ಎಂದು ಹಲವು ಸಂಶೋಧನೆಗಳು ಹೇಳಿವೆ” ಎಂದು ತುಳಸಿ ಹಬ್ಬದ ಮಹತ್ವವನ್ನು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕರಾದ ಸುಮಂತ್ ಆಳ್ವ ವಿದ್ಯಾರ್ಥಿಗಳಿಗೆ ಶುಭಹಾರೈಸುತ್ತಾ ತಿಳಿಸಿದರು.
ವಿದ್ಯಾರ್ಥಿಗಳು ದೀಪಪ್ರಜ್ವಲನೆ ಮಾಡಿ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದರು. ನಂತರ ವೇದವ್ಯಾಸ ಧ್ಯಾನಮಂದಿರದಲ್ಲಿ ವಿದ್ಯಾರ್ಥಿಗಳಿಂದ ಭಜನೆ ಆಚರಿಸಲಾಯಿತು. ನಂತರ ಎಲ್ಲಾ ಅಧ್ಯಾಪಕರು ತುಳಸಿ ಕಟ್ಟೆಗೆ ಹಣತೆಯನ್ನು ಜ್ಞಾನದ ಸಂಕೇತವಾಗಿ ಉರಿಸಿದರು. ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಸಾದ ವಿತರಿಸಲಾಯಿತು. ಈ ರೀತಿಯಾಗಿ ವಿಶೇಷ ರೀತಿಯಲ್ಲಿ ತುಳಸಿ ಹಬ್ಬವನ್ನು ಕಲ್ಲಡ್ಕ ಶ್ರಿರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಶಾಲಾ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ರವರು ಚಾಲನೆ ನೀಡಿದರು. ಶಾಲೆಯ ಶಿಕ್ಷಕಿ ರೂಪಕಲಾರವರು ಕಾರ್ಯಕ್ರಮ ನಿರ್ವಹಿಸಿದರು. ಹಾಗೂ ಎಲ್ಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.


