ಬಂಟ್ವಾಳ:ಮಂಗಳೂರಿನ ಕುತ್ತಾರು ಆದಿಸ್ಥಳ ಎಂಬಲ್ಲಿ ಶ್ರೀ ರಕ್ತೇಶ್ವರಿ ಏಳ್ವೆರ್ ಸಿರಿಗಳು ಕೊರಗಜ್ಜ ಕ್ಷೇತ್ರ ಕ್ಷೇತ್ರ ಪುನರ್ ನಿಮರ್ಾಣ ಬಗ್ಗೆ ಇದೇ 24ರಂದು ಮಧ್ಯಾಹ್ನ 2.30ಗಂಟೆಗೆ ಪಾಣೆಮಂಗಳೂರು ಸುಮಂಗಲಾ ಕಲ್ಯಾಣ ಮಂಟಪದಲ್ಲಿ ಧಾರ್ಮಿಕ ಸಭೆ ನಡೆಯಲಿದೆ.
ಈ ಧಾರ್ಮಿಕ ಸಭೆಯಲ್ಲಿ ಉಳ್ಳಾಲ ಉಳಿಯ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಆಡಳಿತ ಧರ್ಮದರ್ಶಿ ದೇವು ಮೂಲ್ಯಣ್ಣ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಎಂದು ಬಂಟ್ವಾಳ ತಾಲ್ಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
