ಬಂಟ್ವಾಳ: ಸರಕಾರಿ ನೌಕರರ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಕ್ರೀಡೆ ಸಹಕಾರಿಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಭಾನುವಾರ ಬಂಟ್ವಾಳ ಎಸ್ ವಿ ಎಸ್ಮೈ ದಾನದಲ್ಲಿ ಕಂದಾಯ ಇಲಾಖಾ ಜಿಲ್ಲಾ ನೌಕಕರ ಸಂಘ ದ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ನೌಕರರ ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಉದ್ಘಾಟಿಸಿ ಅವರು ಮಾತನಾಡಿದರು.
ಕೆಲಸದ ಜೊತೆ ಕ್ರೀಡೆಯಲ್ಲು ತೊಡಗಿಸಿಕೊಂಡಾಗ ಆರೋಗ್ಯವು ಉತ್ತಮವಾಗಿರುತ್ತದೆ ಎಂದ ಅವರು ಕ್ರೀಡೆ ಮನುಷ್ಯನ ಸಂತೋಷದ ಜೊತೆಗೆ ಸಂಬಂಧವನ್ನು ಗಟ್ಟಿಗೊಳಿಸುತ್ತದೆ ಎಂದು ಹೇಳಿದರು.ಅತಿಥಿಯಾಗಿದ್ದ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್ ಅವರು ಮಾತನಾಡಿ,ಪರಸ್ಪರ ಆತ್ಮೀಯತೆ ಬೆಳೆಯಲು ಕ್ರೀಡೆ ಸಹಾಯಕವಾಗುತ್ತದೆ.

ಕ್ರೀಡೆಯಲ್ಲಿ ಬಹುಮಾನ ಪಡೆಯುವುದು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದು ಹೇಳಿದರು. ಜಿಲ್ಲಾ ಅಧ್ಯಕ್ಷ ಕೆ.ಎಂ.ಮಂಜುನಾಥ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ದಾವಣಗೆರೆ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘ ದ ಅಧ್ಯಕ್ಷ ಅಂದಾನಗೌಡ ದಾನಪ್ಪಗೌಡ, ಸರಕಾರಿ ನೌಕರರ ಸಂಘದ ಅಧ್ಯಕ್ಷಉಮಾನಾಥ ರೈ ಮೇರಾವು, ಪುರಸಭಾ ಸದಸ್ಯ ಗೋವಿಂದ ಪ್ರಭು, ಮೂಡಬಿದ್ರೆ ತಹಶೀಲ್ದಾರ್ ಅನಿತಾಲಕ್ಮೀ, ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಕಡಬ ತಹಶೀಲ್ದಾರ್ ಜೋನ್ ಪ್ರಕಾಶ್ ರೊಡ್ರಿಗಸ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಕಂದಾಯ ಇಲಾಖಾ ತಾಲೂಕು ಅಧ್ಯಕ್ಷ ತೌಫೀಕ್ ಉಪಸ್ಥಿತರಿದ್ದರು.ಕಂದಾಯ ನಿರೀಕ್ಷಕ ನವೀನ್ ಸ್ವಾಗತಿಸಿ, ಕಂದಾಯ ನಿರೀಕ್ಷಕ ರಾಮ ಕೆ ವಂದಿಸಿದರು. ಸುಧಾಕರ ಕಾರ್ಯಕ್ರಮ ನಿರೂಪಿಸಿದರು.