ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿಗೆ ಶನಿವಾರ ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಿದರು.ತಾಲ್ಲೂಕು ಕಚೇರಿಗೆ ಸಂಬಂಧಿಸಿದಂತೆ ಪೈಕಿ ಪಹಣಿ ಒಗ್ಗೂಡಿಸುವ ಬಗ್ಗೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಕುಟುಂಬದ ಸದಸ್ಯರ ಜೋಡಣೆ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದರು.IMG-20191130-WA0138 (1) (1)
  ತಾಲ್ಲೂಕಿನ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ನಿಗದಿತ ಕಾರ್ಯಕ್ರಮಗಳು, ನಿಗದಿತ ಸಮಯದೊಳಗೆ ಮುಗಿಯುವಂತೆ ನೋಡಿಕೊಳ್ಳಬೇಕು. ಕೆಲಸದಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ಮಾಡಿದರು.ಗೌನಿಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ನೂತನ ನಾಡ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.ತಹಶೀಲ್ದಾರ್‌ ಕೆ.ಎನ್‌.ಸುಜಾತ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಇದ್ದರು.

By suddi9

Leave a Reply

Your email address will not be published. Required fields are marked *