ಬಂಟ್ವಾಳ: ಮಾನವಿಕ ಸಂಘದ ವತಿಯಿಂದ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ಕೆ ಪ್ರತಿಭಾ ಸುಬ್ರಹ್ಮಣ್ಯ ಇವರನ್ನು ಸಂಪನ್ಮೂಲ ವ್ಯಕ್ತಿಯನ್ನಾಗಿ ಆಹ್ವಾನಿಸಲಾಗಿತು.್ತ ಇವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ಮತ್ತು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಯೋಗ ಮತ್ತು ಮುದ್ರೆಗಳು ಹಾಗೂ ಸುಸಂಸ್ಕøತ ಮಾನವರಾಗಿ ಬಾಳಲು ಯೋಗದ ಮಹತ್ವದ ಬಗ್ಗೆ ಉಪನ್ಯಾಸಗೈದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಶ್ರೀಮತಿ ಶಶಿಕಲಾ ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಮಾನವಿಕ ಸಂಘದ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ. ಎಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿ ಪರಿಚಯಿಸಿದರು. ಮಾನವಿಕ ಸಂಘದ ಕಾರ್ಯದರ್ಶಿ ಆಶಿಕಾ ಸ್ವಾಗತಿಸಿ, ಜತೆಕಾರ್ಯದರ್ಶಿ ಚೈತ್ರಾಂಜಲಿ ವಂದಿಸಿದರು. ವಿದ್ಯಾರ್ಥಿನಿ ಪಂಚಮಿ ಕಾರ್ಯಕ್ರಮ ನಿರೂಪಿಸಿದರು.

