ಕಲ್ಲಡ್ಕ : ಮೌಲ್ಯಯುತವಾದ ಶಿಕ್ಷಣವು ದೇಶದ ಉನ್ನತಿಗೆ ಪ್ರೇರಕ ಶಕ್ತಿಯಾಗಬಲ್ಲುದು ಶಿಕ್ಷಣವು ಕೇವಲ ಪದವಿಗಳಿಕೆಯ ಉದ್ದೇಶಕ್ಕೆ ಸೀಮಿತವಾಗದೆ ರಾಷ್ಟ್ರ ನಿರ್ಮಾಣದ ಕಾರ್ಯಕ್ಕೆ ವಿನಿಯೋಗವಾಗಬೇಕು” ಎಂದು ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು ಇದರ ಪ್ರಾಂಶುಪಾಲರಾದ ಪ್ರೋ ಡಾ| ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.

1 (370)

ಅವರು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಹಿರಿಯ ವಿದ್ಯಾರ್ಥಿ ಡಾ| ನಾರಾಯಣ ಪೈ ನಾಡಿನ ಸಂಸ್ಕøತಿ ಹಾಗೂ ಪರಂಪರೆಯನ್ನು ಸಮೃದ್ಧಿಗೊಳಿಸಬಲ್ಲ ಶಿಕ್ಷಣವು ವಿದ್ಯಾರ್ಥಿಗಳಿಗೆ ದೊರೆಯಬೇಕು. ಶಿಕ್ಷಕರು ಹಾಗೂ ಪೋಷಕರು ಮಗುವನ್ನು ಚೆನ್ನಾಗಿ ಅರಿತುಕೊಂಡು. ಆತನ ಅಭಿರುಚಿ , ಆಸಕ್ತಿಯನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದರು.ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಮಾತನಾಡಿ “ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣವನ್ನು ಒದಗಿಸುತ್ತಿರುವ ನಮ್ಮ ಈ ಸಂಸ್ಥೆಯಲ್ಲಿ ಪಠ್ಯ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಅವಕಾಶವಿದೆ ಎಂದರು.

ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಬಿ.ಎಸ್ ನಾಯ್ಕ್ ,ಉಪಾಧ್ಯಕ್ಷ ಅಪ್ರಾಯ ಪೈ , ಉಪಾಧ್ಯಕ್ಷೆ ಲಕ್ಷ್ಮೀ , ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್ ಪಿ.ಸಲ್ಡಾನಾ, ವಿದ್ಯಾರ್ಥಿ ನಾಯಕಿ ದೀಪಾಲಿ ಎಂ.ಎಸ್. ಉಪಸ್ಥಿತರಿದ್ದರು.
ಸಂಚಾಲಕ ಜಡ್ತಿಲ ಪ್ರಹಾದ ಶೆಟ್ಟಿ ಸ್ವಾಗತಿಸಿ, ಆಡಳಿತಾಧಿಕಾರಿ ಸಿ.ಶ್ರೀಧರ್ ಪ್ರಸ್ತಾವಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ ವಂದಿಸಿದರು. ಸಹ ಶಿಕ್ಷಕಿಯರಾದ ಸುಧಾ ಎನ್.ರಾವ್ , ಜಯಶ್ರೀ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *