ಇತ್ತೀಚೆಗೆ ಕರೋಪಾಡಿ ಗ್ರಾಮದ ಒಡಿಯೂರು ಗುಡ್ಡ ಕುಸಿತದಿಂದ ಮೃತಪಟ್ಟವರಿಗೆ ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಹಾರ ನೀಡಲು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪರವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮನವಿ ಮಾಡಿದ್ದು ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳ ವೇದಿಕೆಯಲ್ಲಿ ಪರಿಹಾರ ಘೋಷಿಸಿದ್ದು ಅದರಂತೆಯೇ ಅವಘಡದಲ್ಲಿ ಮೃತಪಟ್ಟ ವಿಟ್ಲಪಡ್ನೂರು ಗ್ರಾಮದ ಕಾಪುಮಜಲು ನಿವಾಸಿಯಾದ ರಮೇಶ್ ಮಡಿವಾಳ ಎಂಬವರ ಪತ್ನಿ ಮೋಹಿನಿಯವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ. 3 ಲಕ್ಷದ ಪರಿಹಾರದ ಚೆಕ್‍ನ್ನು ಶಾಸಕರ ಕಚೇರಿಯಲ್ಲಿ ಹಸ್ತಾಂತರಿಸಿದರು.

DSC_7390ಗಾಯಾಳುಗೆ ರೂ.1 ಲಕ್ಷ ಚೆಕ್‍ನ್ನು ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ವಿಟ್ಲಪಡ್ನೂರು ಪಂ.ಅಧ್ಯಕ್ಷ ರವೀಶ್ ಶೆಟ್ಟಿ, ಸದಸ್ಯರಾದ ನಾಗೇಶ್ ಶೆಟ್ಟಿ, ಅಭಿಷೇಕ್ ರೈ, ಕಂದಯ ನಿರೀಕ್ಷಕರಾದ ದಿವಾಕರ್, ವಿಶ್ವನಾಥ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *