ಬಂಟ್ವಾಳ: ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಜಾಕ್ ಕುಕ್ಕಾಜೆ ಅವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು
ಬಂಧಿಸಿದ್ದಾರೆ. ಕುಕ್ಕಾಜೆ ಗ್ರಾಮದ ಬಶಿರ್ (27) ಕಬೀರ್ (23 ) ತನ್ವಿರ್ (23) ಬಂಧಿತ ಆರೋಪಿಗಳಾಗಿದ್ದಾರೆ.ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಜಾಕ್ ಕುಕ್ಕಾಜೆ ಖಚಿತ ವರ್ತಮಾನದ ಮೇರೆಗೆ ಮಂಚಿಯಲ್ಲಿ ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಆರೋಪಿಗಳನ್ನು ನ. 30ರಂದು ಮಂಚಿ ಕಟ್ಟೆಯ ಬಳಿ ಇರಾ ಗ್ರಾಮ ಪಂಚಾಯತಿ ಅಧ್ಯಕ್ಷ ರಜಾಕ್ ರವರ ಮೇಲೆ ಮೂವರ ತಂಡ ಹಲ್ಲೆ ನಡೆಸಿ ಪರಾರಿಯಾಗಿತ್ತು.
ಈ ಬಗ್ಗೆ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ಮಾರ್ಗದರ್ಶನ ದಲ್ಲಿ ಗ್ರಾಮಾಂತರ ಪೋಲೀಸ್ ಠಾಣಾ ಎಸ್. ಐ.ಪ್ರಸನ್ನ ಮತ್ತವರ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

