ಬಂಟ್ವಾಳ: ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿನ್ನಲೆಯಲ್ಲಿ ಶುಕ್ರವಾರ ಅಘೋಷಿತ ಬಂದ್ ನಂತಿದ್ದ  ಬಂಟ್ವಾಳ , ಬಿ.ಸಿ.ರೋಡ್  ಹಾಗು ಮಂಗಳೂರು  ಪರಿಸರ   ಸಂಪೂರ್ಣ ಸಹಜಸ್ಥಿತಿಗೆ ಮರಳಿದೆ.  ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದು ಕೊಂಡು ವ್ಯಾಪಾರ, ವಹಿವಾಟು ನಡೆಯುತಿದೆ .ಆದರೆ ಮುಂಜಾಗ್ರತಾಕ್ರಮವಾಗಿ ಬಿಗು ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ.   ಮಂಗಳೂರಿಗೆ ತೆರಳುವ ಸರಕಾರಿ ಬಸ್ಸುಗಳು ಹಾಗೂ ಖಾಸಗಿ ಬಸ್ಸುಗಳು  ತುಳುನಾಡು  ಪರಿಸರದಲ್ಲಿ ಸಂಚರಿಸುತಿದೆ.
OLYMPUS DIGITAL CAMERA
.
ಮಂಗಳೂರಿನಲ್ಲಿ ನಡೆದ ಅಹಿತಕರ ಘಟನೆ ಹಾಗೂ ದ.ಕ.ಜಿಲ್ಲೆಯಾದ್ಯಂತ ಶುಕ್ರವಾರ ಬಂದ್ ವಾತಾವರಣ ಇದ್ದ ಹಿನ್ನೆಲೆಯಲ್ಲಿ ಶುಕ್ರವಾರ ಬಸ್ಸುಗಳು ಸಂಚರಿಸದೇ ಇರುವುದು ಹಾಗೂ ಶನಿವಾರವೂ ಕಡಿಮೆ ಜನರ ಓಡಾಟ ಇದ್ದ ಕಾರಣ ಕೆಎಸ್ಸಾರ್ಟಿಸಿ ಬಂದ್ ಘಟನೆಯಿಂದ ನಷ್ಟ ಅನುಭವಿಸಬೇಕಾಯಿತು. ಬಿ.ಸಿ.ರೋಡ್ ಘಟಕದಿಂದ ರಾತ್ರಿ ಬೆಂಗಳೂರಿಗೆ ತೆರಳುವ ಬಸ್ಸುಗಳನ್ನು ಹೊರತುಪಡಿಸಿದರೆ 16 ಬಸ್ ಗಳ ಸಂಚಾರವನ್ನು ಶುಕ್ರವಾರ ರದ್ದುಗೊಳಿಸಬೇಕಾಯಿತು ಎಂದು ಡಿಪೊ ಮ್ಯಾನೇಜರ್ ಶ್ರೀಷ ಭಟ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಡಿಪೊದಿಂದ ದಿನವಹಿ 59 ಬಸ್ಸುಗಳು ಸಂಚಾರಕ್ಕೆ ಹೊರಡುತ್ತವೆ.   ಭದ್ರತೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಉಳಿದ ಮಾರ್ಗಗಳಿಗೆ ತೆರಳುವ ಬಸ್ಸುಗಳನ್ನೂ ಪರಿಸ್ಥಿತಿ ನೋಡಿ ಕಳುಹಿಸಲಾಯಿತು. ಆದರೆ ಶನಿವಾರ ಮಂಗಳೂರಿಗೆ ತೆರಳುವ ಬಸ್ಸುಗಳನ್ನು ಹೊರತುಪಡಿಸಿ ಉಳಿದ ಬಸ್ಸುಗಳ ಸಂಚಾರ ನಡೆಸಲಾಗಿದೆ ಎಂದವರು ಹೇಳಿದರು.

By Suddi9

Leave a Reply

Your email address will not be published. Required fields are marked *