ಮಂಗಳೂರು : ಮಂಗಳೂರು ಗಲಭೆ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ನಗರಕ್ಕೆ ಆಗಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪನವರು ನಗರದ ಸರ್ಕಿಟ್ ಹೌಸ್ ನಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಗೃಹ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲೆಯ ಶಾಸಕರುಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

