ಬಂಟ್ವಾಳ : ಶ್ರೀ ಕ್ಷೇತ್ರ  ಕಟೀಲು  ದೇವಳದಲ್ಲಿ ಜ. 22ರಿಂದ ಫೆ.3 ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ,ಸಹಸ್ರ ಚಂಡಿಕಾಯಾಗ,ಕೋಟಿ ಜಪ ಯಜ್ಞ ಹಾಗೂ ಅಷ್ಟಪವಿತ್ರ ನಾಗಮಂಡಲದ ಹಿನ್ನಲೆಯಲ್ಲಿ   ಬಂಟ್ವಾಳ ತಾಲೂಕಿನ ಎಲ್ಲ ಗ್ರಾಮಗಳಿಂದ   ಹೊರೆಕಾಣಿಕೆ ಸಮರ್ಪಣೆ ಹಾಗೂ  ಇನ್ನಿತರ ಜವಾಬ್ದಾರಿಗಳ ಬಗ್ಗೆ ಚರ್ಚಿಸಲು ಜ.5 ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡಿನ   ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ.

kateel-shree-durgaparameshwari

 

ತಾಲೂಕಿನ ಎಲ್ಲ ದೇವಸ್ಥಾನ ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು,ಪದಾಧಿಕಾರಿಗಳು, ವಿವಿಧ ಭಜನಾ ಮಂಡಳಿಗಳ ಅಧ್ಯಕ್ಷರು,ಪದಾಧಿಕಾರಿಗಳು , ಸಂಘಸಂಸ್ಥೆಗಳ ಅಧ್ಯಕ್ಷರು ,ಪದಾಧಿಕಾರಿಗಳು ಈ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವಂತೆ ಬಂಟ್ವಾಳ ತಾಲೂಕು ಸಮಿತಿಯ ಸಂಚಾಲಕರಾದ ಚಂದ್ರಹಾಸ  ಡಿ ಶೆಟ್ಟಿ ರಂಗೋಲಿ,ಭುವನೇಶ್ ಪಚ್ಚಿನಡ್ಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಈ ಸಭೆಯಲ್ಲಿ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ , ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ,ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ,ಮಾಜಿ ಸಚಿವ ರಮಾನಾಥ್ ರೈ ಹಾಗೂ ಹಲವು ಗಣ್ಯರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದು, ಭಗವದ್ಬಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಕೋರಿದ್ದಾರೆ

By suddi9

Leave a Reply

Your email address will not be published. Required fields are marked *