ಬಂಟ್ವಾಳ: ತಾಲೂಕಿನಲ್ಲಿರುವ ಮಂಗಳೂರು ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಕಳೆದ ಮಳೆಗಾಲದಲ್ಲಿ ಉಂಟಾದ ಪ್ರಾಕೃತಿಕ ವಿಕೋಪದಿಂದ ಮನೆ ಹಾನಿ ಫಲಾನುಭವಿಗಳಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಗುರುವಾರ ಬಿ.ಸಿ.ರೋಡಿನಲ್ಲಿರುವ ಸಾಮರ್ಥ್ಯ ಸೌಧದಲ್ಲಿ ಚೆಕ್ ವಿತರಿಸಿದರು.
IMG-20191226-WA0115
ಈ ವೇಳೆ ಮಾತನಾಡಿದ ಖಾದರ್ ಅವರು, ಹಾನಿ ಪ್ರದೇಶಗಳಿಗೆ ಕಂದಾಯ ಇಲಾಖೆ ಹಾಗೂ ಎಂಜಿನಿಯರ್‌ಗಳು ಭೇಟಿ ನೀಡಿದ ವರದಿಯ ಆಧಾರದಲ್ಲಿ ಪರಿಹಾರ ವಿತರಿಸಲಾಗಿದೆ. ಬಾಲಿ ಉಳಿದಿರುವ ಫಲಾನುಭವಿಗಳಿಗೆ ಶೀಘ್ರ ಪರಿಹಾರ ವಿತರಿಸಲಾಗುತ್ತದೆ ಎಂದರು.
ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ಗ್ರಾ.ಪಂ.ಸದಸ್ಯೆವೃAದಾ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಅವರು ಫಲಾನುಭವಿಗಳ ವಿವರ ನೀಡಿದರು. ಒಟ್ಟು ೩೫ ಮಂದಿಗೆ ಪರಿಹಾರ ಧನದ ಚೆಕ್ ವಿತರಿಸಲಾಯಿತು. ಗ್ರಾಮ ಕರಣಿಕರು ಸಹಕರಿಸಿದರು.

By suddi9

Leave a Reply

Your email address will not be published. Required fields are marked *