ಬಂಟ್ವಾಳ : ಶ್ರೀರಾಮ ಪ್ರಥಮದರ್ಜೆ ಕಾಲೇಜು ಕಲ್ಲಡ್ಕ ಇದರ ಪ್ರಭಾವ ವಿಜ್ಞಾನ ಸಂಘವು ಕಂಕಣ ಸೂರ್ಯಗ್ರಹಣದ ವೀಕ್ಷಣೆಯನ್ನು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಸೂರ್ಯನ ಬೆಳಕನ್ನು ಪಿನ್‍ಹೋಲ್ ಉಪಕರಣದ ಮೂಲಕ ಹಾಯಿಸಿ, ಗ್ರಹಣದ ಪ್ರತಿಬಿಂಬವನ್ನು ಪರದೆಯ ಮೇಲೆ ಮೂಡಿಸಿ ಖಗೋಳ ವಿಸ್ಮಯವನ್ನು ವೀಕ್ಷಿಸಲಾಯಿತು. ಭೌತಶಾಸ್ತ್ರ ಉಪನ್ಯಾಸಕ ಅಭಿಷೇಕ್ ಇವರು ಸೂರ್ಯಗ್ರಹಣದ ಹಂತ ಹಂತದ ಬದಲಾವಣೆಯ ಬಗ್ಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಅಧ್ಯಕ್ಷ ಡಾ ಪ್ರಭಾಕರ ಭಟ್ ಕಲ್ಲಡ್ಕ, ಹಿರಿಯರಾದ ಕಮಲಾ ಪ್ರಭಾಕರ ಭಟ್, ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‍ಕಟ್ಟೆ, ಉಪನ್ಯಾಸಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಸೂರ್ಯಗ್ರಹಣವನ್ನು ವೀಕ್ಷಿಸಿದರು.

