ಉಡುಪಿ: ಪ್ರವಾಸಿ ಸ್ಥಳಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು, ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿ ಸರಿಯಾದ ನಿರ್ವಹಣೆ ಮತ್ತು ಪ್ರವಾಸೋದ್ಯಮ ವಲಯದಲ್ಲಿ ಸರಕಾರಿ-ಖಾಸಗಿ ಸಹಭಾಗಿತ್ವ ಮಾದರಿಯನ್ನು ಅಳವಡಿಸುವಂತೆ ಕೋರಿ ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಪ್ರವಾಸೋದ್ಯಮ ಸಚಿವ ಸಿ.ಟಿ ರವಿಅವರಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉದಯಕುಮಾರ್ ಶೆಟ್ಟಿ, ರಾಘವೇಂದ್ರ ಪ್ರಭು ಕರ್ವಾಲು ಉದಯ ನಾಯ್ಕ್ ಉಪಸ್ಥಿತರಿದ್ದರು.
