ಬಂಟ್ವಾಳ: ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವ ಹಾಗೂ ಹಿರಿಯ ಸಾಹಿತಿ ದಿ.ಡಾ.ಏರ್ಯ ಲಕ್ಷ್ಮಿ ನಾರಾಯಣ ಆಳ್ವ  ಹೆಸರಿನಲ್ಲಿ ನೀಡಲಾಗುವ ಏರ್ಯ ಸ್ಮೃತಿ ಪ್ರಶಸ್ತಿ-೨೦೧೯  ಪ್ರದಾನ ಸಮಾರಂಭ ಬಂಟವಾಳ ಬಂಟರಭವನದಲ್ಲಿ   ಜ.4ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯಲಿದೆ.ನಿವೃತ್ತ ಲೋಕಾಯುಕ್ತ ಜಸ್ಟಿಸ್ ಎನ್.ಸಂತೋಷ್ ಹೆಗ್ಡೆ ,ಮುಂಬಯಿ ಆಲ್ ಕಾರ್ಗೋ ಲಾಜಿಸ್ಟಿಕ್ ಲಿ.ನ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಈ ಸಂದರ್ಭ ಮುಂಬಯಿ ಆಲ್ ಕಾರ್ಗೋ ಲಾಜಿಸ್ಟಿಕ್ ಲಿ.ನ ಕಾರ್ಯನಿರ್ವಾಹಕರಾದ ಆರತಿ ಶಶಿಕಿರಣ್ ಶೆಟ್ಟಿ ಅವರಿಗೆ ಸನ್ಮಾನ,  ಸಂಗೀತ ನಿರ್ದೇಶಕ ಗುರುಕಿರಣ್ ಅವರ ಮಾರ್ಗದರ್ಶನದಲ್ಲಿ ಸಾಂಸ್ಖೃತಿಕ ಕಾರ್ಯಕ್ರಮವು ಜರಗಲಿದೆ. ಬಂಟ್ವಾಳ ಬಂಟರ ಸಂಘದ ಅಭಿವೃದ್ದಿಗೆ ಹಿರಿಯ ಸಾಹಿತಿ ದಿ.ಡಾ.ಏರ್ಯ ಲಕ್ಷ್ಮಿ ನಾರಾಯಣ ಆಳ್ವರವರು ಅವಿಸ್ಮರಣೀಯ ಕೊಡುಗೆ ನೀಡಿರುವ ಹಿನ್ನಲೆಯಲ್ಲಿ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ತಾಲೂಕಿನ ಬಂಟ ಸಮುದಾಯದ ಸಾಧಕರಿಗೆ ತಲಾ ಒಬ್ಬರಂತೆ ಪ್ರತಿವರ್ಷ ಏರ್ಯ ಸ್ಮೃತಿ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದ್ದು,ಈ ಬಾರಿ ಸಾಹಿತಿ ವಿಜಯ ಶೆಟ್ಟಿ ಸಾಲೆತ್ರೂರು ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘದ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಡಿ  ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *