ಬಂಟ್ವಾಳ: ಸಜೀಪಮೂಡ ಸರಕಾರಿ ಪ್ರೌಢಶಾಲೆಗೆ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಯಡಿ ನಿರ್ಮಿಸಲಾದ ಸುಮಾರು ಮೂರು ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಆವರಣ ಗೋಡೆಯನ್ನು ಉದ್ಘಾಟಿಸಲಾಯಿತು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಪ್ರೌಢಶಾಲೆಯ ಸಂಸ್ಥಾಪಕ ಬಿ .ಸದಾನಂದ ಪೂಂಜಾ ಅವರು ಅವರಣಗೋಡೆಯ ಉದ್ಘಾಟನೆ ನೆರವೇರಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಎಸ್, ಪ್ರೌಢ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯಪ್ರಕಾಶ್ ,ಕಾಲೇಜು ಪ್ರಾಚಾರ್ಯ ಜಯರಾಮ್ ಶೆಟ್ಟಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ,ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸುಬ್ರಹ್ಮಣ್ಯ ಭಟ್ ಎಂ ,ಗ್ರಾಮ ಪಂಚಾಯಿತ್ ಅಧ್ಯಕ್ಷ ವಿಶ್ವನಾಥ ಬೆಲ್ಚಡ, ಉಪನ್ಯಾಸಕ ವಿಷ್ಣುಮೂರ್ತಿ ಮಯ್ಯ ಮೊದಲಾದವರು ಉಪಸ್ಥಿತರಿದ್ದರು.
