ಬಂಟ್ವಾಳ: ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘವು ಬೆಳ್ಳಿಹಬ್ಬ ಆಚರಣೆಯ ಸಂಭ್ರಮದಲ್ಲಿದ್ದು,ಈ ಪ್ರಯುಕ್ತ ಶ್ರೀಗುರುಪೂಜೆ,ಸಾಮೂಹಿಕ ಶ್ರೀಸತ್ಯನಾರಾಯಣಪೂಜೆ,ಸಾಧಕರಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವು ಜ.5 ರಂದು ಮಣಿ ಶ್ರಿಉ ನಾರಾಯಣಗುರು ಸಮುದಾಯಭವನದಲ್ಲಿ ಜರಗಲಿದೆ. ಗುರುವಾರ ಬಿ.ಸಿ.ರೋಡಿನ ಪ್ರಸ್ ಕ್ಲಬ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಂಘದ ಗೌರವಾಧ್ಯಕ್ಷ ಈಶ್ವರ ಪೂಜಾರಿ ಹಿರ್ತಡ್ಕ ಅವರು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರು ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದು,ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ ಎಂದರು.ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಗೌರವಾಧ್ಯಕ್ಷ ಜಯ ಸಿ.ಸುವರ್ಣ ,ಬಂಟ್ವಾಳ ತಾ.ಬಿ.ಸ.ಸೇ.ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ರವರಿಗೆ ಗೌರವಾರ್ಪಣೆ,ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ,ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ರವರಿಗೆ ಅಭಿನಂದನೆ ಹಾಗೂ ಖ್ಯಾತ ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆ,ಪ್ರಶಸ್ತಿ ಪುರಸ್ಕೃತ ಪ್ರಶಾಂತ್ ಅನಂತಾಡಿ,ಜಿಲ್ಲಾ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ತ್ರಿವೇಣಿರಮೇಶ್ ಪೂಜಾರಿ ಮುಜಲು ಅವರನ್ನು ಸನ್ಮಾನಿಸಲಾಗುವುದು ಹಾಗೆಯೇ ಶೈಕ್ಷಣಿಕ,ಕ್ರೀಡಾ,ಸಾಂಸ್ಕೃತಿಕ ಮೊದಲಾದ ಕ್ಷೇತ್ರಗಳಲ್ಲಿ ಸಾಧನೆಗೈದ ಬಿಲ್ಲವ ಸಮಾಜ ಬಾಂಧವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.ಕಳೆದ 25 ವರ್ಷಗಳಲ್ಲಿ ಯುವವಾಹಿನಿ ಘಟಕದ ಸಹಕಾರದೊಂದಿಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘದ ವತಿಯಿಂದ ನಡೆಸಲಾಗಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ನಾರಾಯಣ ಸಾಲ್ಯಾನ್ ಅನಂತಾಡಿ ಪದಾಧಿಕಾರೊಗಳಾದ ಸೋಮಪ್ಪ ಪೂಜಾರಿ,ಸುರೇಶ್ ಪೂಜಾರಿ,ಪ್ರವೀಣ್ ಗುಡ್ಡಕೋಡಿ,ಶ್ರೀನಿವಾಸ ಪೂಜಾರಿ ಪೆರಾಜೆ,ಬಾಲಕೃಷ್ಣ ಸೇರ,ಗಂಗಾಧರ ಮಾಣಿ ಮೊದಲಾದವರಿದ್ದರು.
