ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪ್ರದರ್ಶನ ಸಲುವಾಗಿ ಬೆಂಕಿ ಇಲ್ಲದ ಅಡುಗೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು. “ಮಗುವಿನ ಬೌದ್ಧಿಕ, ಭೌತಿಕ, ಸಾಮಾಜಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕøತಿಕ, ನೈತಿಕ, ಆಧ್ಯಾತ್ಮಿಕ ಮೌಲ್ಯಗಳಿರುವ, ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಮಾಡುವುದೇ ಶಿಕ್ಷಣ.

IMG20191227101042ಜೀವನದಲ್ಲಿ ಯಾವುದೇ ಸಾಧನೆಗೆ ಮಾನವನ ಬುದ್ಧಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯೆ-ಬುದ್ಧಿ ಇವೆರಡು ಜೀವನ ಪರ್ಯಂತ ಜೊತೆ-ಜೊತೆಯಲ್ಲೇ ಸಾಗುತ್ತಿರುತ್ತದೆ. ಇಂತಹ ಸ್ಪರ್ಧೆಗಳಿಂದ ಮಕ್ಕಳ ಜೀವನ ಕೌಶಲ್ಯಗಳು ಅಭಿವೃದ್ಧಿಯಾಗುತ್ತದೆ” ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|ಪ್ರಭಾಕರ್ ಭಟ್ ಕಲ್ಲಡ್ಕರವರು ನುಡಿದರು.

IMG-20191228-WA0007
3ನೇ ತರಗತಿಯಿಂದ 7ನೇ ತರಗತಿಯವರೆಗೆ ತರಗತಿವಾರು ಈ ಸ್ಪರ್ಧೆಗಳನ್ನು ನಡೆಸಲಾಯಿತು. ಒಟ್ಟು 150 ವಿದ್ಯಾರ್ಥಿಗಳು ಭಾಗವಹಿಸಿದ್ದು ವಿವಿಧ ಬಗೆಯ ತಿಂಡಿ-ತಿನಿಸುಗಳನ್ನು ಬೆಂಕಿ ಇಲ್ಲದೇ ತಯಾರಿಸಿದರು.ಡಾ|ಪ್ರಭಾಕರ್ ಭಟ್ ಕಲ್ಲಡ್ಕ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರುರವರು ಉಪಸ್ಥಿತರಿದ್ಧರು.

IMG20191227103913

By suddi9

Leave a Reply

Your email address will not be published. Required fields are marked *