ಮಂಗಳೂರು, ಅ.1: ಸನ್ಮಾನ್ಯ ಪ್ರಧಾನ ಮಂತ್ರಿಗಳು ಅಕ್ಟೋಬರ್ 2 ಗಾಂಧೀ ಜಯಂತಿಯಿಂದ ಅಕ್ಟೋಬರ್ 11 ಜಯಪ್ರಕಾಶ್ ನಾರಾಯಣ್ ಜನ್ಮದಿನದ ವರೆಗೆ ಮೊದಲ ಹಂತದ ‘ಸ್ವಚ್ಛ ಭಾರತ’ ಅಭಿಯಾನಕ್ಕೆ ಕರೆ ನೀಡಿರುವುದರನ್ವಯ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕೇಂದ್ರ ಮತ್ತು ಎಲ್ಲಾ ವಾಡರ್್ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಸಮಿತಿ ತಿಳಿಸಿದೆ.

ಗಾಂಧೀ ಜಯಂತಿಯಂದು ಜಿಲ್ಲೆಯ ಸಂಸದರು, ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಜನಪ್ರತಿನಿಧಿಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ವಾಡರ್್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಾರ್ವಜನಿಕರೂ ಪಾಲ್ಗೊಂಡು ಸಹಕರಿಸಬೇಕಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ. ಪ್ರತಾಪಸಿಂಹ ನಾಯಕ್ ವಿನಂತಿಸಿದ್ದಾರೆ.
