ದೆಹಲಿ: ದೆಶದ ಆರ್ಥಿಕ ಹಿಂಜರಿತ, ಹೂಡಿಕೆ ಕೊರತೆ ಮತ್ತು ನಿರುದ್ಯೋಗ ಸಮಸ್ಯೆ ಹೆಚ್ತುತ್ತಿರುವುದರಿಂದ ಪ್ರಧಾನ ಮಂತ್ರಿ ಮೋದಿಯವರು ಭಾರತದ ಖ್ಯಾತ ಉದ್ಯಮಿಗಳ ಜೋತೆ ದೇಶದ ಆರ್ಥಿಕತೆ ಎದುರಿಸುತ್ತಿರುವ ಸವಾಲುಗಳು ಹಾಗೂ ಆರ್ಥಿಕಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಮಹತ್ತರವಾದ ಸಭೆ ನಡೆಸಿದರು. ಈಗಾಗಲೆ 2020-21ರ ಕೇಂದ್ರ ಬಜೆಟ್ ಗೆ ದಿನಗಣನೆ ಆರಂಭವಾಗಿದ್ದು ಈ ಬಾರಿಯ ಕೇಂದ್ರ ಬಜೆಟ್ ಮಹತ್ತರವಾದದ್ದಾಗಿದೆ. ಹೀಗಾಗಿ ಪ್ರಧಾನಿ ಮೋದಿಯವರು ದೇಶದ ಪ್ರಮುಖ ಉದ್ಯಮಿಗಳ ಜೊತೆ ಸಮಾಲೋಚನೆ ನಡೆಸಿದರು.

27481614241_736da0546e_h

 

ಈ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀ ಅಧ್ಯಕ್ಷ ಮುಕೇಶ್ ಅಂಬಾನಿ, ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ, ಅದಾನಿ ಗ್ರೂಪ್ ಸ್ಥಾಪಕ ಗೌತಮ್ ಅದಾನಿ,ಭಾರ್ತಿ ಎಂಟರ್‌ಪ್ರೈಸಸ್‌ ಮುಖ್ಯಸ್ಥ ಸುನೀಲ್‌ ಭಾರ್ತಿ ಮಿತ್ತಲ್‌, ಗಣಿಗಾರಿಕೆ ಉದ್ಯಮಿ ಅನಿಲ್‌ ಅಗರ್ವಾಲ್‌,ಮಹಿಂದ್ರಾ ಗ್ರೂಪ್‌ನ ಆನಂದ್‌ ಮಹಿಂದ್ರಾ, ಟಾಟಾ ಸನ್ಸ್‌ ಅಧ್ಯಕ್ಷ ಎನ್‌. ಚಂದ್ರಶೇಖರನ್‌, ಎಲ್‌ ಅಂಡ್‌ ಟಿ ಮುಖ್ಯಸ್ಥ ಎ.ಎಂ ನಾಯಕ್‌ ,ಟಿವಿಎಸ್‌ ಮುಖ್ಯಸ್ಥ ವೇಣು ಶ್ರೀನಿವಾಸನ್‌, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಈ ಹಿಂದೆ ದೇಶದ ಆರ್ಥಿಕ ಕುಸಿತದ ತಡೆಗಾಗಿ ಕೇಂದ್ರ ಸರ್ಕಾರ ಕಾರ್ಪೊರೇಟ್‌ ತೆರಿಗೆ ಕಡಿತ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿತ್ತು. ಅಲ್ಲದೆ 10 ಸಾರ್ವಜನಿಕ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ 4ಕ್ಕೆ ಸೀಮಿತ ಸೇರಿದಂತೆ ಹಲವು ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿತ್ತು.ಆದರೆ, ಅದರಿಂದ ನಿರೀಕ್ಷಿತ ಮಟ್ಟದ ಪ್ರಯೋಜನವಾಗಿರಲಿಲ್ಲ. ಹೀಗಾಗಿ, ದೇಶದ ಪ್ರಮುಖ ಉದ್ಯಮಿಗಳ ಜೊತೆ ಸಮಾಲೋಚನೆ ನಡೆಸುವ ಮೂಲಕ ಉದ್ಯಮಗಳು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಭೆ ನಡೆಸಿ ಖ್ಯಾತ ಉದ್ಯಮಿಗಳ ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಿದರು.

By suddi9

Leave a Reply

Your email address will not be published. Required fields are marked *